For the best experience, open
https://m.newskannada.com
on your mobile browser.
Advertisement

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ; ಕಾರಿನಲ್ಲಿ ಶವ ಪತ್ತೆ !

ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 24 ವರ್ಷದ ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು, ನೆರೆಹೊರೆಯವರು ಗುಂಡಿನ ಸದ್ದು ಕೇಳಿತ್ತು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
03:40 PM Apr 14, 2024 IST | Ashitha S
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ  ಕಾರಿನಲ್ಲಿ ಶವ ಪತ್ತೆ

ಕೆನಡಾ: ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 24 ವರ್ಷದ ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು, ನೆರೆಹೊರೆಯವರು ಗುಂಡಿನ ಸದ್ದು ಕೇಳಿತ್ತು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

Advertisement

ಏಪ್ರಿಲ್ 12 ರಂದು ರಾತ್ರಿ 11 ಗಂಟೆಯ ಸುಮಾರಿಗೆ ನಿವಾಸಿಗಳಿಗೆ ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಕಾಂಗ್ರೆಸ್ ವಿದ್ಯಾರ್ಥಿ ಘಟಕದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಮುಖ್ಯಸ್ಥ ವರುಣ್ ಚೌಧರಿ ಅವರು ಎಕ್ಸ್ ಟ್ಯಾಗ್ ಮಾಡುವ ಪೋಸ್ಟ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿ ವಿದ್ಯಾರ್ಥಿಯ ಕುಟುಂಬಕ್ಕೆ ನೆರವು ನೀಡುವಂತೆ ವಿನಂತಿಸಿದ್ದಾರೆ.

ಚಿರಾಗ್ ಆಂಟಿಲ್ ಅವರ ಕುಟುಂಬವು ಕ್ರೌಡ್ ಫಂಡಿಂಗ್ ಪ್ಲಾಟ್‌ಫಾರ್ಮ್ GoFundMe ಮೂಲಕ ಅವರ ದೇಹವನ್ನು ಭಾರತಕ್ಕೆ ಹಿಂದಿರುಗಿಸಲು ಹಣವನ್ನು ಸಂಗ್ರಹಿಸುತ್ತಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

Advertisement

Advertisement
Tags :
Advertisement