ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂಡಿಗೋ, ಮುಂಬೈ ಏರ್​ಪೋರ್ಟ್​ಗೆ ಕೇಂದ್ರದ ನೋಟಿಸ್​

ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯ ಶೋಕಾಸ್​ ನೋಟಿಸ್​ ನೀಡಿದೆ.
02:10 PM Jan 16, 2024 IST | Ashitha S

ಮುಂಬೈ:  ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯ ಶೋಕಾಸ್​ ನೋಟಿಸ್​ ನೀಡಿದೆ.

Advertisement

ಜನವರಿ 16ರಂದು ಸಚಿವಾಲಯ ನೀಡಿರುವ ಅಧಿಕೃತ ಹೇಳಿಕೆಯಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಚಿವಾಲಯದ ಎಲ್ಲ ಅಧಿಕಾರಿಗಳ ಜತೆ ಸಭೆ ನಡೆಸಿ, ವಿಮಾನ ಸಂಚಾರ ವಿಳಂಬದಿಂದ ಉಂಟಾದ ಅವಾಂತರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಶೋಕಾಸ್​ ನೋಟಿಸ್​ ಪ್ರಕಾರ, ಇಂಡಿಗೋ ವಿಮಾನ ಮತ್ತು ಮುಂಬೈ ವಿಮಾನ ನಿಲ್ದಾಣ ಎರಡೂ ಕೂಡ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಸೂಕ್ತವಾದ ಅನುಕೂಲ ವ್ಯವಸ್ಥೆಗಳನ್ನು ನೀಡುವಲ್ಲಿ ವಿಫಲವಾಗಿದೆ. ವಿಶ್ರಾಂತಿ ಕೊಠಡಿಗಳು ಮತ್ತು ಟರ್ಮಿನಲ್‌ನಲ್ಲಿ ಉಪಹಾರ ವ್ಯವಸ್ಥೆಯಂತಹ ಸಾಮಾನ್ಯ ಸೌಲಭ್ಯಗಳನ್ನೂ ಪ್ರಯಾಣಿಕರಿಗೆ ನೀಡಿಲ್ಲ ಎಂದು ಸಚಿವಾಲಯ ಅಸಮಾಧಾನ ಹೊರಹಾಕಿದೆ.

Advertisement

ವಿಮಾನ ನಿಲ್ದಾಣದ ಆಡಳಿತ ಮಂಡಳಿ ಈ ನಡೆಯಿಂದ ಪ್ರಯಾಣಿಕರು ದಣಿದಿದ್ದಲ್ಲದೆ, ಕಿರುಕುಳಕ್ಕೆ ಒಳಗಾಗಿದ್ದಾರೆ. ನಿಜಕ್ಕೂ ಇದು ಸ್ವೀಕಾರಾರ್ಹವಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಭದ್ರತಾ ಮಾನದಂಡಗಳು ಮತ್ತು ಕಾರ್ಯಾಚರಣೆಯ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಆ ರೀತಿ ಮಾಡದೆಯೇ ವಿಮಾನ ಕಾರ್ಯಾಚರಣೆಯನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಸಚಿವಾಲಯ ಉಲ್ಲೇಖಿಸಿದೆ.

ಹಾಗಾಗಿ ಇದರ ಬೆನ್ನಲ್ಲೇ ಕೇಂದ್ರ ವಿಮಾನಯಾನ ಸಚಿವಾಲಯ ಇಂಡಿಗೋ ವಿಮಾನ ಮತ್ತು ಏರ್​ಪೋರ್ಟ್​ ಆಡಳಿತ ಮಂಡಳಿಗೆ ನೋಟಿಸ್​ ನೀಡಿದ್ದು, ಇಂದೇ ಉತ್ತರ ನೀಡುವಂತೆ ಕೇಳಿದೆ.

ಘಟನೆ ಸಂಬಂಧ ನಿರ್ದಿಷ್ಟ ಸಮಯದಲ್ಲಿ ಉತ್ತರಗಳನ್ನು ನೀಡದಿದ್ದರೆ, ಆರ್ಥಿಕ ದಂಡ ಸೇರಿದಂತೆ ಕಠಿಣ ಕಾನೂನು ಕ್ರಮ ಜಾರಿ ಮಾಡಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.

Advertisement
Tags :
LatestNewsNewsKannadaಕೇಂದ್ರ ಸರ್ಕಾರನವದೆಹಲಿ
Advertisement
Next Article