For the best experience, open
https://m.newskannada.com
on your mobile browser.
Advertisement

ಮಂಗಳೂರು: ಮಿಲಾಗ್ರಿಸ್ ಕಾಲೇಜ್‌ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು ಮಿಲಾಗ್ರಿಸ್ ಕಾಲೇಜು,ಆಂತರಿಕ ಗುಣಮಟ್ಟ ಖಾತರಿ ಕೋಶ, ಹಾಗೂ ಲಿಂಗ ಸಮಾನತೆ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
06:05 PM Mar 18, 2024 IST | Ashitha S
ಮಂಗಳೂರು  ಮಿಲಾಗ್ರಿಸ್ ಕಾಲೇಜ್‌ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು: ಮಂಗಳೂರು ಮಿಲಾಗ್ರಿಸ್ ಕಾಲೇಜು,ಆಂತರಿಕ ಗುಣಮಟ್ಟ ಖಾತರಿ ಕೋಶ, ಹಾಗೂ ಲಿಂಗ ಸಮಾನತೆ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

Advertisement

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಬ್ಯಾಂಕ್ ಮ್ಯಾನೇಜರ್ ಮತ್ತು ವಾಣಿಜ್ಯೋದ್ಯಮಿ ಕು. ಮಾರ್ಜೋರಿ ಟೆಕ್ಸೀರಾ ಆಗಮಿಸಿ ಅವರು ತಮ್ಮ ಭಾಷಣದಲ್ಲಿ 'ಒಬ್ಬ ಮಹಿಳೆ ತನ್ನ ಕುಟುಂಬದಲ್ಲಿ ತಾಯಿ, ಮಗಳು, ಸೊಸೆ ಎಂಬ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಾಳೆ. ಹಾಗೆಯೇ ಸಾಮಾಜಿಕ ವ್ಯವಹಾರಗಳ ಮೂಲಕ ಅರ್ಥಿಕ ಭದ್ರತೆಯನ್ನು ನೀಡಿ ಸಮಾಜದ ಅಭಿವೃದ್ಧಿಯ ಶಿಲ್ಪಿಯಾಗಿ ಮುಂದುವರಿ ಯುತ್ತಿದ್ದಾರೆ ಮಹಿಳೆಯು ಒಂದು ಸಮುದಾಯದ ಹಾಗೂ ದೇಶದ ಅಭಿವೃದ್ದಿಗೆ ಕಾರಣಕರ್ತ ಳಾಗುತ್ತಾಳೆ. ಅವರಿಗೆ ಸಿಗಬೇಕಾದ ಸ್ಥಾನಮಾನ, ಗೌರವ ಕೊಡುವುದು ಎಲ್ಲರ ಕರ್ತವ್ಯವಾಗಿದೆ. ಪ್ರತಿ ಮಹಿಳೆಯು ಸಾಮಾಜಿಕ ವ್ಯವಹಾರಗಳ ಮೂಲಕ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳುವಲ್ಲಿ ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರು ಎಂದು ಶ್ಲಾಘಿಸಿದರು.

2

Advertisement

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರೆ| ಫಾ| ಮೈಕೆಲ್, ಸಾಂತುಮಯೋರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಿಲಾಗ್ರಿಸ್ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು. ಶ್ರಾವ್ಯ ಸ್ವಾಗತಿಸಿದರು. ವಿದ್ಯಾರ್ಥಿ ನಿ ದೀಪ ವಂದಿಸಿದರು, ವಿದ್ಯಾರ್ಥಿನಿ ಮೌನ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

2 (1)

Advertisement
Tags :
Advertisement