ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋಟಿ ಬೆಲೆಗೆ ಹರಾಜಾದ ಇಂಗ್ಲೆಂಡ್​ನ ದಾಂಡಿಗ

ಐಪಿಎಲ್ ಸೀಸನ್ 17 ಮಿನಿ ಹರಾಜಿನ ಮೊದಲ ಸುತ್ತಿನಲ್ಲಿ ಇಂಗ್ಲೆಂಡ್ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ 4 ಕೋಟಿ ರೂ.ಗೆ ಹರಾಜಾಗಿದ್ದಾರೆ. ಮೊದಲ ಸೆಟ್​ನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೂಕ್ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಆಸಕ್ತಿವಹಿಸಿದ್ದವು.
05:01 PM Dec 19, 2023 IST | Ashitha S

ದುಬೈ: ಐಪಿಎಲ್ ಸೀಸನ್ 17 ಮಿನಿ ಹರಾಜಿನ ಮೊದಲ ಸುತ್ತಿನಲ್ಲಿ ಇಂಗ್ಲೆಂಡ್ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ 4 ಕೋಟಿ ರೂ.ಗೆ ಹರಾಜಾಗಿದ್ದಾರೆ. ಮೊದಲ ಸೆಟ್​ನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೂಕ್ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಆಸಕ್ತಿವಹಿಸಿದ್ದವು.

Advertisement

ಆದರೆ ಅಂತಿಮವಾಗಿ 4 ಕೋಟಿ ರೂ. ಬಿಡ್ಡಿಂಗ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ತನ್ನದಾಗಿಸಿಕೊಂಡಿದೆ. ಅದರಂತೆ ಈ ಬಾರಿ ಹ್ಯಾರಿ ಬ್ರೂಕ್ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ.

ಐಪಿಎಲ್ 2023 ರಲ್ಲಿ ಹ್ಯಾರಿ ಬ್ರೂಕ್ ಅವರನ್ನು 13.25 ಕೋಟಿ ರೂ. ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಖರೀದಿಸಿತ್ತು. SRH ಪರ 11 ಪಂದ್ಯಗಳನ್ನಾಡಿದ್ದ ಬ್ರೂಕ್ 1 ಶತಕದೊಂದಿಗೆ ಕೇವಲ 190 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ತಂಡವು ಅವರನ್ನು ಬಿಡುಗಡೆ ಮಾಡಿತ್ತು.

Advertisement

 

Advertisement
Tags :
IPL 2024 Auctionಇಂಗ್ಲೆಂಡ್
Advertisement
Next Article