ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಗ್ರಸ್ಥಾನಕ್ಕೇರಿದ ಕೆಕೆಆರ್: ಆರ್‌ಸಿಬಿ ಸ್ಥಾನ ಎಷ್ಟರಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ 16 ಪಂದ್ಯಗಳು ಮುಗಿದಿವೆ. ಈ ಹದಿನಾರು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.
07:42 AM Apr 04, 2024 IST | Ashitha S

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ 16 ಪಂದ್ಯಗಳು ಮುಗಿದಿವೆ. ಈ ಹದಿನಾರು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.

Advertisement

ಈ ಬಾರಿಯ ಐಪಿಎಲ್​ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ 2.518 ನೆಟ್​ ರನ್ ಹೊಂದುವ ಮೂಲಕ ಆರ್​ಆರ್​ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್​ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

Advertisement

ಇನ್ನು ಆಡಿರುವ ನಾಲ್ಕು ಮ್ಯಾಚ್​ಗಳಲ್ಲಿ 3 ರಲ್ಲಿ ಸೋತಿರುವ ಆರ್​ಸಿಬಿ ಈ ಬಾರಿ 8ನೇ ಸ್ಥಾನಕ್ಕೇರಿದೆ. ಕೆಕೆಆರ್ ವಿರುದ್ಧ ಹೀನಾಯವಾಗಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಸ್ಥಾನ ಕುಸಿತ ಕಂಡಿದ್ದು, ಇದರಿಂದ ಆರ್​ಸಿಬಿ ಒಂದು ಸ್ಥಾನ ಮೇಲೇರಿದೆ. ಈ ಮೂಲಕ ಆರ್​ಸಿಬಿ 2 ಅಂಕ ಮತ್ತು -0.876 ನೆಟ್​ ರನ್ ರೇಟ್​ನೊಂದಿಗೆ 8ನೇ ಸ್ಥಾನದಲ್ಲಿದೆ.

 

Advertisement
Tags :
indiaIPLIPL 2024KKRLatestNewsNewsKannadaNewsKarnatakaRCB
Advertisement
Next Article