For the best experience, open
https://m.newskannada.com
on your mobile browser.
Advertisement

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ.
06:05 PM May 12, 2024 IST | Ashitha S
ಬೆಂಗಳೂರಿನಲ್ಲಿ ಭಾರಿ ಮಳೆ  ಆರ್​ಸಿಬಿ  ಡೆಲ್ಲಿ ಪಂದ್ಯ ರದ್ದು

ಬೆಂಗಳೂರು: ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ.

Advertisement

ಪ್ಲೇ ಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ನಡೆಯುವುದು ಅತ್ಯವಶ್ಯಕವಾಗಿದೆ. ಆದರೆ ಬೆಂಗಳೂರಿನಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಪಂದ್ಯದ ದಿನವೂ ವರುಣನ ಅವಕೃಪೆ ಎದುರಾಗುವ ಭೀತಿ ಅಭಿಮಾನಿಗಳಲ್ಲಿತ್ತು. ಅದರಂತೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ಇಂದು ಮಧ್ಯಾಹ್ನನದಿಂದಲೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬಿರುಗಾಳಿ ಸಹಿತ ಧಾರಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಆರ್​ಸಿಬಿ ಪ್ಲೇಆಫ್​ಗೆ ಹತ್ತಿರವಾಗುವುದನ್ನು ನೋಡಬೇಕೆಂದುಕೊಂಡಿದ್ದ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

Advertisement

ಅದಾಗ್ಯೂ ಎಷ್ಟೇ ಮಳೆ ಬಂದು ನಿಂತರು ಮೈದಾನವನ್ನು ಕೇವಲ ಅರ್ಧ ಗಂಟೆಯೊಳಗೆ ಪಂದ್ಯಕ್ಕೆ ಸಜ್ಜುಗೊಳಿಸುವ ತಂತ್ರಜ್ಞಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದೆ. ಈ ಮೈದಾನಕ್ಕೆ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮೈದಾನದಲ್ಲಿ ನಿಂತ ಮಳೆ ನೀರನ್ನು ಬೇಗನೇ ಮೈದಾನದಿಂದ ಹೊರಹಾಕಬಹುದಾಗಿದೆ. ಆದ್ದರಿಂದ ಇಂದು ಮಳೆ ಬಂದು ನಿಂತರೂ ಪಂದ್ಯ ಆರಂಭವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದೂ ಹೇಳಲಾಗುತ್ತಿದೆ.

Advertisement
Tags :
Advertisement