For the best experience, open
https://m.newskannada.com
on your mobile browser.
Advertisement

ಐಪಿಎಲ್ 2024: ಇಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
01:45 PM Apr 27, 2024 IST | Ashitha S
ಐಪಿಎಲ್ 2024  ಇಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ

ದೆಹಲಿ: ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

Advertisement

ಎರಡು ತಂಡಗಳಲ್ಲೂ ಬಲಿಷ್ಠ ಬ್ಯಾಟ್ಸ್ಮನ್ ಗಳಿದ್ದು, ಇಂದು ರನ್ ಹೊಳೆ ಹರಿಸಲು ಸಜ್ಜಾಗಿದ್ದಾರೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಸೆಣಸಾಡಲಿವೆ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2024) ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. 9 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.386 ನೆಟ್​ ರನ್​ ರೇಟ್​ನೊಂದಿಗೆ 8 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

Advertisement

ಎಂಟು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.227.

Advertisement
Tags :
Advertisement