For the best experience, open
https://m.newskannada.com
on your mobile browser.
Advertisement

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.
11:57 AM Feb 09, 2024 IST | Ashitha S
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ

ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

Advertisement

ಇದು ರಾಜ್ಯ ಪೊಲೀಸ್​ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹಿರಿಯ ಐಪಿಎಸ್​ ಅಧಿಕಾರಿ ಸಿ. ಹೆಚ್​ ಪ್ರತಾಪ್​ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು. ಪ್ರತಾಪ್​ ರೆಡ್ಡಿ ಬಿ.ಟೆಕ್​ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್​ನ ಐಪಿಎಸ್​ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು.

ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್​ ಆಗಿ ಪ್ರತಾಪ್​ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

Advertisement

Advertisement
Tags :
Advertisement