ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇರಾಕ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ ಇರಾನ್

ಇಸ್ರೇಲಿ ಬೇಹುಗಾರಿಕಾ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಇರಾಕ್ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇರಾಕ್‌ನ ಕುರ್ದಿಸ್ತಾನ್‌ನಲ್ಲಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಹೇಳಿದೆ. ಇಸ್ರೇಲ್‌ನ ಬೇಹುಗಾರಿಕಾ ಸಂಸ್ಥೆ ಮೊಸಾದ್‌ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.
09:44 AM Jan 16, 2024 IST | Ashitha S

ಇರಾನ್: ಇಸ್ರೇಲಿ ಬೇಹುಗಾರಿಕಾ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಇರಾಕ್ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇರಾಕ್‌ನ ಕುರ್ದಿಸ್ತಾನ್‌ನಲ್ಲಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಹೇಳಿದೆ. ಇಸ್ರೇಲ್‌ನ ಬೇಹುಗಾರಿಕಾ ಸಂಸ್ಥೆ ಮೊಸಾದ್‌ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.

Advertisement

ಸಿರಿಯಾದ ಅಲೆಪ್ಪೊ ಗ್ರಾಮಾಂತರ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಮೆಡಿಟರೇನಿಯನ್ ಸಮುದ್ರದ ದಿಕ್ಕಿನಿಂದ 4 ಕ್ಷಿಪಣಿಗಳು ಬಂದಿತ್ತು ಎಂದು ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್​ ಮಾನಿಟರ್ ಹೇಳಿದೆ.

ಈ ಪ್ರದೇಶದಲ್ಲಿ ಇರಾನ್ ವಿರೋಧಿಗಳ ಬೇಹುಗಾರಿಕೆ ಕೇಂದ್ರಗಳು ಮತ್ತು ಪಡೆಗಳನ್ನು ನಾಶಮಾಡಲು ಇಂದು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.

Advertisement

ಇನ್ನು ಕ್ಷಿಪಣಿ ದಾಳಿಯಲ್ಲಿ ಉದ್ಯಮಿ ಕುರ್ದಿಶ್ ಉದ್ಯಮಿ ಪೆಶ್ರಾ ದಿಜಾಯಿ ಮತ್ತು ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇರಾನ್ ಈ ಹಿಂದೆ ಇರಾಕ್‌ನ ಉತ್ತರ ಕುರ್ದಿಸ್ತಾನ್ ಪ್ರದೇಶದಲ್ಲಿ ದಾಳಿ ನಡೆಸಿತ್ತು. ಕುರ್ದಿಸ್ತಾನ್ ಸೆಕ್ಯುರಿಟಿ ಕೌನ್ಸಿಲ್ ಆಫ್ ಇರಾಕ್ ಪ್ರಕಾರ, ಈ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ.

Advertisement
Tags :
indiaLatestNewsNewsKannadaಇರಾಕ್ಇರಾನ್ಕ್ಷಿಪಣಿ ದಾಳಿ
Advertisement
Next Article