ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ ದಾಳಿ

ಪಾಕಿಸ್ತಾನದ ಜೈಶ್ ಅಲ್ ಅದ್ಲ್‌ ಉಗ್ರಗಾಮಿ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್‌ ಇಂದು(ಜ.17) ಕ್ಷಿಪಣಿ ದಾಳಿ ನಡೆಸಿದೆ.
09:04 AM Jan 17, 2024 IST | Ramya Bolantoor

ಇಸ್ಲಾಮಾಬಾದ್‌: ಪಾಕಿಸ್ತಾನದ ಜೈಶ್ ಅಲ್ ಅದ್ಲ್‌ ಉಗ್ರಗಾಮಿ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್‌ ಇಂದು(ಜ.17) ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ತಿಳಿದಿದೆ.

Advertisement

ಜೈಶ್ ಅಲ್ ಅದ್ಲ್‌ ಉಗ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟಲು ಇರಾನ್ ಪ್ರಯತ್ನಿಸಿದ್ದು, ಉಗ್ರಗಾಮಿ ಗುಂಪಿನೊಡನೆ ಗಡಿಯಲ್ಲಿ ಯುದ್ಧ ಸಾರಿತ್ತು. ಉಗ್ರ ನೆಲೆಗಳನ್ನು ನಾಶ ಮಾಡಲು ಇರಾನ್‌ಗೆ ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಮೇಲೆ ನಡೆದ ದಾಳಿಯಲ್ಲಿ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಐಆರ್‌ಎನ್‌ಎ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಇದರ ಬಗ್ಗೆ ಪಾಕಿಸ್ತಾನ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉಗ್ರ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.

Advertisement

 

Advertisement
Tags :
LatestNewsNewsKannadaಇರಾನ್ಪಾಕಿಸ್ತಾನ
Advertisement
Next Article