ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೇಲ್‌ ಬಿಕ್ಕಟ್ಟು: ಇರಾನ್‌ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್‌ ಚರ್ಚೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.
10:49 PM Nov 05, 2023 IST | Ashika S

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.

Advertisement

"ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ ಮತ್ತು ಅಂತರಾಷ್ಟ್ರೀಯ ಸಮುದಾಯದ ಕಳವಳಗಳ ಕುರಿತು ಚರ್ಚೆ ನಡೆಸಿದರು. ಇಂತಹ ಕಠಿಣ ಸಂದರ್ಭದಲ್ಲಿ ಮಾನವೀಯ ಬೆಂಬಲ ನೀಡುವ ಮತ್ತು ಈ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸದಂತೆ ತೆಡೆಯಲು ಪರಸ್ಪರ ಸಂಪರ್ಕದಲ್ಲಿರುವ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಜೈಶಂಕರ್‌ ಎಕ್ಸ್‌ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರ ಸಂಘಟನೆಯನ್ನು ಇರಾನ್ ಬೆಂಬಲಿಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇಸ್ರೇಲ್‌ ನ ಮೈತ್ರಿ ರಾಷ್ಟ್ರ ಭಾರತ ಇರಾನ್‌ನೊಂದಿಗೆ ಮಾತುಕತೆ ನಡೆಸಿರುವುದು ಮಹತ್ವ ಪಡೆದಿದೆ.

Advertisement

Advertisement
Tags :
LatetsNewsNewsKannadaಇರಾನ್ ಸಹವರ್ತಿಎಸ್.ಜೈಶಂಕರ್ವಿದೇಶಾಂಗವಿದೇಶಾಂಗ ಸಚಿವವ್ಯವಹಾರ
Advertisement
Next Article