For the best experience, open
https://m.newskannada.com
on your mobile browser.
Advertisement

ಚಂದ್ರನ ಕಕ್ಷೆಯಿಂದ ಭೂಮಿ ಕಕ್ಷೆಗೆ ಮತ್ತೆ ಚಂದ್ರಯಾನ-3 ಪ್ರೊಪಲ್ಷನ್‌ ಮಾಡ್ಯೂಲ್‌

ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್‌ ಮಾಡ್ಯೂಲ್‌ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ಇಸ್ರೋ ಯಶಸ್ವಿಯಾಗಿ ಮರಳಿ ತರಲಿದೆ
12:25 PM Dec 05, 2023 IST | Ashitha S
ಚಂದ್ರನ ಕಕ್ಷೆಯಿಂದ ಭೂಮಿ ಕಕ್ಷೆಗೆ ಮತ್ತೆ ಚಂದ್ರಯಾನ 3 ಪ್ರೊಪಲ್ಷನ್‌ ಮಾಡ್ಯೂಲ್‌

ನವದೆಹಲಿ: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್‌ ಮಾಡ್ಯೂಲ್‌ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ಇಸ್ರೋ ಯಶಸ್ವಿಯಾಗಿ ಮರಳಿ ತರಲಿದೆ.

Advertisement

ಚಂದ್ರನ ಕಾರ್ಯಾಚರಣೆಯ ಉದ್ದೇಶ ಪೂರೈಸಿದ ನಂತರ ಪ್ರೊಪಲ್ಷನ್‌ ಮಾಡ್ಯೂಲ್‌ ಅನ್ನು ಚಂದ್ರನಿಂದ ಭೂಮಿಗೆ ಕಕ್ಷೆ ಬದಲಿಸಲಾಗಿದೆ. ಚಂದ್ರನ ಮೇಲೆ ಉಪಗ್ರಹ ಉಡಾವಣೆ ಮಾಡುವುದು ಮಾತ್ರವಲ್ಲ, ಅದರ ಉಪಕರಣಗಳನ್ನು ಹಿಂತಿರುಗಿ ತರುವ ಕಾರ್ಯದಲ್ಲೂ ಇಸ್ರೋ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ.

ವಿಕ್ರಮ್ ಲ್ಯಾಂಡರ್‌ನಲ್ಲಿನ ಹಾಪ್ ಪ್ರಯೋಗದಂತೆ ಮತ್ತೊಂದು ವಿಶಿಷ್ಟ ಪ್ರಯೋಗದಲ್ಲಿ ಚಂದ್ರಯಾನ-3 ರ ಪ್ರೊಪಲ್ಷನ್ ಮಾಡ್ಯೂಲ್ (PM) ಅನ್ನು ಚಂದ್ರನ ಸುತ್ತಲಿನ ಕಕ್ಷೆಯಿಂದ ಭೂಮಿಯ ಸುತ್ತಲಿನ ಕಕ್ಷೆಗೆ ಸ್ಥಳಾಂತರಿಸಲಾಯಿತು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

Advertisement

ಲ್ಯಾಂಡರ್‌ ಮತ್ತು ರೋವರ್‌ 1 ಚಂದ್ರನ ದಿನ (ಭೂಮಿಯ 14 ದಿನಗಳಿಗೆ ಸಮ) ಚಂದ್ರನ ಮೇಲೆ ಕಾರ್ಯಾಚರಣೆ ನಡೆಸಿವೆ. ಆ ಮೂಲಕ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಸಂಪೂರ್ಣವಾಗಿ ಪೂರೈಸಿವೆ.

Advertisement
Tags :
Advertisement