ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಕ್ಕುಪತ್ರಗಳ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.
08:51 PM Jan 17, 2024 IST | Ashika S

ಉಡುಪಿ: ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

Advertisement

ಕುಂದಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕುಂದಾಪುರ ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಮುಂದಿನ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೆ ಹಕ್ಕು ಪತ್ರಗಳ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು. ಜನಪ್ರತಿನಿಧಿಗಳಿಗೆ ಅಧಿಕಾರ ಮುಖ್ಯ ಅಲ್ಲ, ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

Advertisement

ಉಡುಪಿ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಭಾಗ್ಯ: ಉಡುಪಿ ಜಿಲ್ಲೆ ತನ್ನದೇ ವೈಶಿಷ್ಟ್ಯಗಳನ್ನು ಹೊಂದಿದೆ. ಇಂಥ ಜಿಲ್ಲೆಗೆ ಉಸ್ತುವಾರಿ ಸಚಿವೆ ಆಗಿರುವುದು ನನ್ನ ಭಾಗ್ಯ ಎಂದರು.

ಸಮಾರಂಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Advertisement
Tags :
LatetsNewsNewsKannadaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಲಕ್ಷ್ಮೀ ಆರ್ ಹೆಬ್ಬಾಳ್ಕರ್ಹಕ್ಕುಪತ್ರ
Advertisement
Next Article