ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ರವೀಂದ್ರ ಜಡೇಜಾ

ಇಲ್ಲಿನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್​ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕಿದ್ದಾರೆ.
03:03 PM Jan 25, 2024 IST | Ashitha S

ಹೈದರಾಬಾದ್:‌ ಇಲ್ಲಿನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್​ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕಿದ್ದಾರೆ.

Advertisement

ಪ್ರಸ್ತುತ ಟೀ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿದೆ. ಆಂಗ್ಲ ಬ್ಯಾಟರ್​ಗಳಿಗೆ ದುಸ್ವಪ್ನವಾಗಿ ಕಾಡಿದ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ಆರ್​ ಅಶ್ವಿನ್, ಅಕ್ಷರ್ ಪಟೇಲ್ ಕ್ರಮವಾಗಿ 3, 2, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.

Advertisement

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಈ ಸಾಧನೆ ಮಾಡಿದ ಭಾರತೀಯ ಬೌಲರ್​ಗಳಾಗಿದ್ದಾರೆ.

Advertisement
Tags :
IND vs ENGindiaLatestNewsNewsKannadaಅಂತಾರಾಷ್ಟ್ರೀಯ ಕ್ರಿಕೆಟ್‌ಕ್ರಿಕೆಟ್ರವೀಂದ್ರ ಜಡೇಜಾ
Advertisement
Next Article