ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್‌ ಬಿಟ್ಟಿದ್ದೇಕೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌?

ಕಳೆದ ವಿಧಾನಸಭೆ ಚುನಾವಣೆ ಮೊದಲು ಬಿಜೆಪಿಯಿಂದ ಬಂಡೆದ್ದು ಪಕ್ಷ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮಾತೃಪಕ್ಷಕ್ಕೆ ಮರಳಿದ್ದಾರೆ. ಮಧ್ಯಾಹ್ನ ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಬರ ಮಾಡಿಕೊಳ್ಳಲಾಯಿತು.
02:38 PM Jan 25, 2024 IST | Ashitha S

ದೆಹಲಿ: ಕಳೆದ ವಿಧಾನಸಭೆ ಚುನಾವಣೆ ಮೊದಲು ಬಿಜೆಪಿಯಿಂದ ಬಂಡೆದ್ದು ಪಕ್ಷ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮಾತೃಪಕ್ಷಕ್ಕೆ ಮರಳಿದ್ದಾರೆ. ಮಧ್ಯಾಹ್ನ ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಬರ ಮಾಡಿಕೊಳ್ಳಲಾಯಿತು.

Advertisement

ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ರಾಜೀವ್‌ ಚಂದ್ರಶೇಖರ್‌ ಸಹಿತ ಹಲವರು ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಕೆಲವು ದಿನಗಳಿಂದ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿಗೆ ಮರಳುವ ಕುರಿತು ಚರ್ಚೆಗಳು ನಡೆದಿದ್ದವು. ಗುರುವಾರ ಬೆಳಿಗ್ಗೆಯೇ ದೆಹಲಿಯಲ್ಲಿ ಕಾಣಿಸಿಕೊಂಡ ಜಗದೀಶ್‌ ಶೆಟ್ಟರ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದರು. ಅವರಿಂದ ಹಸಿರು ನಿಶಾನೆ ದೊರೆಯುತ್ತಿದ್ದಂತೆ ಬಿಜೆಪಿ ಕಚೇರಿಗೆ ಆಗಮಿಸಿ ಸೇರ್ಪಡೆಗೊಂಡರು. ಕೆಲವೇ ಹೊತ್ತಿನಲ್ಲಿ ಎಲ್ಲಾ ಪ್ರಕ್ರಿಯೆಗಳು ಮುಗಿದು ಹೋದವು.

Advertisement

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಸೇರಿದ್ದೆ, ಅಲ್ಲಿಂದ ಇಲ್ಲಿಯವರೆಗೆ ತಾವು ಮತ್ತೆ ಪಕ್ಷಕ್ಕೆ ವಾಪಸ್ ಬೇರಬೇಕೆಂದು ಕಾರ್ಯಕರ್ತರು, ಶಾಸಕರು, ಮಾಜಿ ಶಾಸಕರು, ಮುಖಂಡರು ಅಪೇಕ್ಷೆ ವ್ಯಕ್ತಪಡಿಸುತ್ತಾರೆ. ರಾಷ್ಟ್ರೀಯ ನಾಯಕರು ಸಹ ಆಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವ, ಹಿರಿಯ ನಾಯಕರಾದ ಅಮಿತ್ ಶಾ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿದ್ದೆ. ಬಹಳ ವಿಶ್ವಾಸದಿಂದ ನಮ್ಮವನ್ನು ಸ್ವಾಗತಿಸಿದರು. ಬಿಜೆಪಿಗೆ ಮತ್ತೆ ಸೇರುತ್ತಿರುವುದು ಸಂತಸವಾಗಿದೆ ಎಂದು ಹೇಳಿದರು.

ಕೆಲವು ಕಾರಣಗಳಿಂದ ಬಿಜೆಪಿ ತೊರೆದಿದ್ದೆ. ಕಾಂಗ್ರೆಸ್‌ ಸೇರಿದ್ದರೂ ಅಲ್ಲಿಯೂ ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ. ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಬಾದ ಹೇಳುತ್ತೇನೆ. ಸದ್ಯ ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯನಾಗಿ ಕೆಲಸ ಮಾಡುತ್ತಿದ್ದೇನೆ. ಪರಿಷತ್ ಸಭಾಪತಿ ಬಸವರಾಜ ಹೊರಟಿ ಅವರಿಗೆ ಫೋನ್‌ನಲ್ಲಿ ಮಾತನಾಡಿದ್ದು, ರಾಜೀನಾಮೆ ಕೊಟ್ಟಿದ್ದೇನೆ, ಕರ್ನಾಟಕದ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ಸಲ್ಲಿಸರುವ ರಾಜೀನಾಮೆಯನ್ನು ಇಮೇಲ್ ಮೂಲಕ ಕಳಿಸಿದ್ದೇನೆ. ಅಧಿಕೃತವಾಗಿಯೂ ರಾಜೀನಾಮೆ ಪತ್ರ ಕಳುಹಿಸುವೆ ಎಂದು ಶೆಟ್ಟರ್‌ ಹೇಳಿದರು.

ಇನ್ನು  ಇತ್ತ ಘಟನೆ ಸಂಬಂಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ‌ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ​​​​ ಯಾವುದೇ ಅನ್ಯಾಯ ಆಗಿಲ್ಲ ಎಂದಿದ್ದಾರೆ. ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್​ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ.

Read More:

1.

ಮತ್ತೇ ಸ್ವಪಕ್ಷದತ್ತ ಮುಖ ಮಾಡಿದ ಜಗದೀಶ್ ಶೆಟ್ಟರ್: ಮಹತ್ವದ ಘೋಷಣೆ

2.

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

 

Advertisement
Tags :
BJPCongressGOVERNMENTindiaLatestNewsNewsKannadaಜಗದೀಶ್ ಶೆಟ್ಟರ್ನವದೆಹಲಿ
Advertisement
Next Article