For the best experience, open
https://m.newskannada.com
on your mobile browser.
Advertisement

3ನೇ ಟೆಸ್ಟ್: ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದಾರೆ. ಈ ದ್ವಿಶತಕದೊಂದಿಗೆ ಅವರ ಬ್ಯಾಟ್​ನಿಂದ ಬರೋಬ್ಬರಿ 12​ ಸಿಕ್ಸರ್ ಹೊರ ಬಂದಿದೆ.
04:15 PM Feb 18, 2024 IST | Ashitha S
3ನೇ ಟೆಸ್ಟ್  ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ರಾಜ್​ಕೋಟ್​: ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದಾರೆ. ಈ ದ್ವಿಶತಕದೊಂದಿಗೆ ಅವರ ಬ್ಯಾಟ್​ನಿಂದ ಬರೋಬ್ಬರಿ 12​ ಸಿಕ್ಸರ್ ಹೊರ ಬಂದಿದೆ.

Advertisement

ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಅಲ್ಲದೆ ಟೆಸ್ಟ್​ ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ ಒಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಆ ಮೂಲಕ ಇಂಗ್ಲೆಂಡ್‌ಗೆ ಗೆಲ್ಲಲು 557ರನ್‌ಗಳ ಬೃಹತ್ ಗುರಿ ನೀಡಿದೆ.

ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. 1996 ರಲ್ಲಿ ಝಿಂಬಾಬ್ವೆ ವಿರುದ್ಧ ವಾಸಿಂ ಅಕ್ರಮ್ 12 ಸಿಕ್ಸ್​ಗಳೊಂದಿಗೆ 257 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

Advertisement

ಇದೀಗ ಇಂಗ್ಲೆಂಡ್ ವಿರುದ್ಧ ಸಿಕ್ಸ್​ಗಳ ಸುರಿಮಳೆಗೈದಿರುವ ಯಶಸ್ವಿ ಜೈಸ್ವಾಲ್ ಅಕ್ರಮ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು 22 ವರ್ಷದ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

Advertisement
Tags :
Advertisement