For the best experience, open
https://m.newskannada.com
on your mobile browser.
Advertisement

ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿಗೆ ಸೇರ್ಪಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿಯವರು ಅಧಿಕೃತವಾಗಿ ಬಿಜೆಪಿಗೆ ಸೋಮವಾರ ಸೇರ್ಪಡೆಯಾಗಲಿದ್ದಾರೆ.
02:35 PM Mar 24, 2024 IST | Chaitra Kulal
ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿಯವರು ಅಧಿಕೃತವಾಗಿ ಬಿಜೆಪಿಗೆ ಸೋಮವಾರ ಸೇರ್ಪಡೆಯಾಗಲಿದ್ದಾರೆ.

Advertisement

ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂಬ ಮಾಹಿತಿ ತಿಳಿದು ಬರಲಿದೆ.

ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.

Advertisement

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ವಿಧಾನ ಸಭಾ ಚುನಾವಣೆಯಲ್ಲಿ ಕೆಆರ್‌ಪಿಪಿ ಒಂದೇ ಸ್ಥಾನ ಗೆದ್ದಿದ್ದರೂ ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಏಟು ನೀಡಿತ್ತು.

Advertisement
Tags :
Advertisement