ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಪಾನ್‌ ಭೂಕಂಪ: ಮೃತರ ಸಂಖ್ಯೆ 62ಕ್ಕೆ ಏರಿಕೆ

ಜಪಾನ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಇದುವರೆಗೂ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ.
12:27 PM Jan 03, 2024 IST | Gayathri SG

ಟೋಕಿಯೊ: ಜಪಾನ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಇದುವರೆಗೂ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ.

Advertisement

ಈ ಭೂಕಂಪನದಿಂದ 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. 31,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಹೊಸ ವರ್ಷದ ಮೊದಲ ದಿನದಂದೇ ಸಂಭವಿಸಿದ 7.5 ತೀವ್ರತೆಯ ಭೂಕಂಪವು, ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹುಟ್ಟುಹಾಕಿತು. ನೂರಾರು ಕಟ್ಟಡಗಳು ಬೆಂಕಿಯಿಂದ ಧ್ವಂಸಗೊಂಡಿವೆ. ವಾಜಿಮಾ ಮತ್ತು ಸುಜು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಮನೆಗಳನ್ನು ನೆಲಸಮವಾಗಿವೆ. ಪ್ರಿಫೆಕ್ಚರ್‌ನ ನೋಟೊ ಪೆನಿನ್ಸುಲಾವು ತೀವ್ರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ.

Advertisement

Advertisement
Tags :
BreakingNewsJAPANLatestNewsNewsKannadaಭೂಕಂಪ
Advertisement
Next Article