ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

30ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ

ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಚಾಣಾಕ್ಯ ಬೌಲಿಂಗ್​ನಿಂದ ಬುಮ್ರಾ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಟೀಂ ಇಂಡಿಯಾದಲ್ಲಿ ಮಾತ್ರವಲ್ಲದೆ ವಿಶ್ವ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಹೆಸರು ಸಂಪಾಧಿಸಿದ್ದಾರೆ.
10:53 AM Dec 06, 2023 IST | Ashitha S

ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಚಾಣಾಕ್ಯ ಬೌಲಿಂಗ್​ನಿಂದ ಬುಮ್ರಾ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಟೀಂ ಇಂಡಿಯಾದಲ್ಲಿ ಮಾತ್ರವಲ್ಲದೆ ವಿಶ್ವ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಹೆಸರು ಸಂಪಾಧಿಸಿದ್ದಾರೆ.

Advertisement

ಅತಿ ಕಡಿಮೆ ಸಮಯದಲ್ಲಿ ಭಾರತ ತಂಡದ ಪ್ರಮುಖ ಬೌಲರ್ ಎಂದು ಗುರುತಿಸಿಕೊಂಡ ಬುಮ್ರಾ, ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ಗಳನ್ನು ಗಳಿಸಿದ್ದರು. ಹಾಗೆಯೇ ಭಾರತವನ್ನು ಫೈನಲ್​ಗೆ ಕೊಂಡೊಯ್ಯುವಲ್ಲು ಪ್ರಮುಖ ಪಾತ್ರವಹಿಸಿದ್ದರು.

ಜಸ್ಪ್ರೀತ್ ಬುಮ್ರಾ ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. 2022 ರಲ್ಲಿ, ಬರ್ಮಿಂಗ್ಹ್ಯಾಮ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಬುಮ್ರಾ, ಸ್ಟುವರ್ಟ್ ಬ್ರಾಡ್ ಬೌಲ್ ಮಾಡಿದ ಒಂದು ಓವರ್‌ನಲ್ಲಿ ಬರೋಬ್ಬರಿ 35 ರನ್ ಚಚ್ಚಿದ್ದರು. ಇದು ಇಲ್ಲಿಯವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಹೆಚ್ಚು ರನ್ ಗಳಿಸಿದ ದಾಖಲೆಯಾಗಿದೆ.
ಅಲ್ಲದೆ 2019 ರಲ್ಲಿಯೇ ಬುಮ್ರಾ ಏಕದಿನ ಸ್ವರೂಪದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದರು.

Advertisement

ಬುಮ್ರಾ ಅವರು ಭಾರತೀಯ ಬೌಲರ್ ಆಗಿ ತಮ್ಮ ಟೆಸ್ಟ್ ಚೊಚ್ಚಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ವಿಷಯದಲ್ಲಿ ನಂಬರ್-1 ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. 2018 ರಲ್ಲಿ ಟೆಸ್ಟ್ ಕ್ರಿಕೆಟ್​ ಪದಾರ್ಪಣೆ ಮಾಡಿದ ಬುಮ್ರಾ ಆ ವರ್ಷ ಒಟ್ಟು 48 ಟೆಸ್ಟ್ ವಿಕೆಟ್‌ಗಳನ್ನು ಪಡೆದರು. ಇನ್ನು ಬುಮ್ರಾ ಇತ್ತೀಚೆಗೆ ತಂದೆಯಾಗಿದ್ದಾರೆ. ಅವರ ಪತ್ನಿ ಸಂಜನಾ ಗಣೇಶನ್ ಸೆಪ್ಟೆಂಬರ್ 4 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮುದ್ದಾದ ಮಗುವಿನ ಹೆಸರು ಅಂಗದ್ ಜಸ್ಪ್ರೀತ್ ಬುಮ್ರಾ ಎಂದು ಬಹಿರಂಗಪಡಿಸಿದ್ದರು.

Advertisement
Tags :
birthdayJasprit BumrahLatestNewsNewsKannadaಕ್ರಿಕೆಟ್ಜಸ್ಪ್ರೀತ್ ಬುಮ್ರಾನವದೆಹಲಿ
Advertisement
Next Article