ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಯ್​ ಶಾಗೆ ಒಲಿದ "ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್" ಪ್ರಶಸ್ತಿ ಗರಿ

ಸಾಲು ಸಾಲು ಸವಾಲುಗಳ ನಡುವೆಯೂ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
01:53 PM Dec 05, 2023 IST | Ashitha S

ಮುಂಬೈ: ಸಾಲು ಸಾಲು ಸವಾಲುಗಳ ನಡುವೆಯೂ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisement

ಈ ಸುದ್ದಿಯನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು. ‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಈ ವಿಶೇಷ ಗೌರವವನ್ನು ಪಡೆದ ಮೊದಲ ವ್ಯಕ್ತಿ ಜಯ್ ಶಾ. ಅವರು ನಿಜವಾಗಿಯೂ ಈ ಗೌರವಕ್ಕೆ ಅರ್ಹರು ಎಂದು ಬರೆದುಕೊಂಡಿದೆ.

ಬಿಸಿಸಿಐನಲ್ಲಿ ಕಾರ್ಯದರ್ಶಿ ಹುದ್ದೆಯ ಹೊರತಾಗಿ, ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರೂ ಆಗಿದ್ದಾರೆ. ಈ ಹುದ್ದೆಗೇರುವ ಮೊದಲು ಅವರು ಗುಜರಾತ್ ಕ್ರಿಕೆಟ್ ಸಂಸ್ಥೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

Advertisement

ಇನ್ನು ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಾಂಗಿಯಾಗಿ ಭಾರತದಲ್ಲಿ ಯಶಸ್ವಿ ವಿಶ್ವಕಪ್ ಆಯೋಜಿಸಿದ ಶ್ರೇಯ ಜಯ್​ ಶಾ ಅವರಿಗೆ ಸಲ್ಲುತ್ತದೆ. ಅಲ್ಲದೇ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ.

Advertisement
Tags :
AWARDGOVERNMENTindiaLatestNewsNewsKannadasportsಜಯ್​ ಶಾ
Advertisement
Next Article