ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡಿಯೇ ಮಾಡ್ತೀನಿ ಎಂದ ಜಯಪ್ರಕಾಶ್‌ ಹೆಗ್ಡೆ

ಜಾತಿ ಗಣತಿ ವರದಿ ವಿವಾದ ರಾಜ್ಯದಲ್ಲಿ ಮತ್ತೆ ಭುಗಿಲೆದ್ದಿದೆ. ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ ನೀಡಲು ಮುಂದಾಗಿದ್ದಾರೆ. ಇದೇ ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
04:20 PM Nov 04, 2023 IST | Ashika S

ಬೆಂಗಳೂರು: ಜಾತಿ ಗಣತಿ ವರದಿ ವಿವಾದ ರಾಜ್ಯದಲ್ಲಿ ಮತ್ತೆ ಭುಗಿಲೆದ್ದಿದೆ. ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ ನೀಡಲು ಮುಂದಾಗಿದ್ದಾರೆ. ಇದೇ ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

Advertisement

ಮೊನ್ನೇ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಪ್ರತಿಕ್ರಿಯಿಸಿದ್ದು, ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Advertisement

Advertisement
Tags :
LatetsNewsNewsKannadaಜಾತಿ ಗಣತಿವರದಿವರದಿ ಸಲ್ಲಿಕೆವಿವಾದಹಿಂದುಳಿದ ವರ್ಗ
Advertisement
Next Article