ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೆರೋಸಾ ಶಾಲೆ ಪ್ರಕರಣ: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶ - ದಿನೇಶ್ ಗುಂಡೂರಾವ್

ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆ ಈ ಕುರಿತು ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
03:06 PM Feb 17, 2024 IST | Gayathri SG

ಮಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆ ಈ ಕುರಿತು ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Advertisement

ಇಂದು ಅವರು ಮಂಗಳೂರಿನಲ್ಲಿ ಮಾತನಾಡಿ, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಐಎಎಸ್ ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದಿದ್ದಾರೆ.

ಈ ಹಿಂದೆ ನೀಡಿದ್ದ ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದು ಹೇಳಿದರು.

Advertisement

Advertisement
Tags :
LatestNewsNewsKannadaಐಎಎಸ್ಮಂಗಳೂರು
Advertisement
Next Article