For the best experience, open
https://m.newskannada.com
on your mobile browser.
Advertisement

ಜೆಸ್ವಿನ್‌ ಆಲ್ಡ್ರಿನ್‌ ಮತ್ತು ಅಂಕಿತಾ ಧ್ಯಾನಿ ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ ಗೆ ಆಯ್ಕೆ

ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಆಲ್ಡ್ರಿನ್‌ ಹಾಗೂ 5000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ವಿಶ್ವ ರ್‍ಯಾಂಕಿಂಗ್‌ ಆಧಾರದ ಮೇಲೆ ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
04:41 PM Jul 08, 2024 IST | Chaitra Kulal
ಜೆಸ್ವಿನ್‌ ಆಲ್ಡ್ರಿನ್‌ ಮತ್ತು ಅಂಕಿತಾ ಧ್ಯಾನಿ ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ ಗೆ ಆಯ್ಕೆ

ನವದೆಹಲಿ: ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಆಲ್ಡ್ರಿನ್‌ ಹಾಗೂ 5000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ವಿಶ್ವ ರ್‍ಯಾಂಕಿಂಗ್‌ ಆಧಾರದ ಮೇಲೆ ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

Advertisement

ಒಲಿಂಪಿಕ್ಸ್​ನ ಅಥ್ಲೆಟಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯರ ಅಥ್ಲೀಟ್​ಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಆಗಸ್ಟ್‌ 1ರಿಂದ ಅಥ್ಲೆಟಿಕ್ಸ್‌ ಶುರುವಾಗಲಿದೆ. ಕಳೆದ ವಾರ ಭಾರತದ 9 ಅಥ್ಲೀಟ್​ಗಳು ವಿಶ್ವ ಶ್ರೇಯಾಂಕದ ಆಧಾರದಲ್ಲಿ ಒಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದರು. ಈ ವೇಳೆ ಭಾರತೀಯ ಅಥ್ಲೆಟಿಕ್ಸ್‌ ಸಂಸ್ಥೆ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಒಟ್ಟು 28 ಸ್ಪರ್ಧಿಗಳ ಹೆಸರು ಪ್ರಕಟಿಸಿತ್ತು.

ಇದೀಗ ಮತ್ತೆ ಇಬ್ಬರ ಹೆಸರನ್ನು ಸೇರ್ಪಡೆಗೊಳಿಸಿದೆ. 30 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ

Advertisement

22 ವರ್ಷದ 5000 ಮೀ. ಓಟಗಾರ್ತಿ ಅಂಕಿತಾ ಕಳೆದ 2023ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದರು. ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಇತ್ತೀಚೆಗಷ್ಟೇ ರಾಷ್ಟ್ರೀಯ ಅಂತರ್-ರಾಜ್ಯ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದರು.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​” ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ.

Advertisement
Tags :
Advertisement