ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಬಿಜೆಪಿ ಸೇರ್ಪಡೆ

ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ​ ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ.
01:09 PM Jan 24, 2024 IST | Ashika S

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್ ​ ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ.

Advertisement

ಇಂದು (ಬುಧವಾರ) ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು

Advertisement

ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Advertisement
Tags :
LatetsNewsNewsKannadaಆಪ್ತಕಾಂಗ್ರೆಸ್ಕೆಎಎಸ್ ಅಧಿಕಾರಿಬಿಜೆಪಿಮಲ್ಲಿಕಾರ್ಜುನ್ ಖರ್ಗೆಸೇರ್ಪಡೆ
Advertisement
Next Article