For the best experience, open
https://m.newskannada.com
on your mobile browser.
Advertisement

ಬಿಜೆಪಿಗೆ ಮತ್ತೊಂದು ಶಾಕ್; ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
10:20 AM Apr 23, 2024 IST | Ashitha S
ಬಿಜೆಪಿಗೆ ಮತ್ತೊಂದು ಶಾಕ್  ಪರಿಷತ್ ಸದಸ್ಯತ್ವಕ್ಕೆ ಕೆ ಪಿ ನಂಜುಂಡಿ ರಾಜೀನಾಮೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಪಿ.ನಂಜುಂಡಿ ಅವರನ್ನು ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದಾಗ ನನ್ನನ್ನು ಎಂಎಲ್ಸಿ ಮಾಡಿ ಸುಮ್ಮನಾದ್ರು. ಏನೂ ಜವಾಬ್ದಾರಿ ಕೊಡಲಿಲ್ಲ. ರಾಜೀನಾಮೆ ಕೊಡುವಂತೆ ಎರಡು ವರ್ಷಗಳಿಂದ ಒತ್ತಡವಿತ್ತು.

Advertisement

ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಲೆಯಿಲ್ಲದಂತಾಗಿದೆ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.

Advertisement
Tags :
Advertisement