ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೊದಲ ದಿನವೇ 19.79 ಕೋಟಿ ಗಳಿಸಿದ ‘ಕಾಟೇರ’

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ ಕಾಟೇರ ಸಿನಿಮಾ ರಾಜ್ಯಾದ್ಯಾಂತ ರಿಲೀಸ್ ಆಗಿದೆ.
11:18 AM Dec 30, 2023 IST | Ramya Bolantoor

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ ಕಾಟೇರ ಸಿನಿಮಾ ರಾಜ್ಯಾದ್ಯಾಂತ ರಿಲೀಸ್ ಆಗಿದೆ. ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ನಿನ್ನೆ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಈ ಸಿನಿಮಾ  ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಗಳಿಸಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ   19.79 ಕೋಟಿ ರೂಪಾಯಿ ಎಂದು  ಅಂದಾಜಿಸಲಾಗಿದೆ.

Advertisement

ನಿನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ.

ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು.

Advertisement

Advertisement
Tags :
filmKARNATAKALatestNewsNewsKannada
Advertisement
Next Article