For the best experience, open
https://m.newskannada.com
on your mobile browser.
Advertisement

 ‘ಕಾಟೇರ’ ಸಿನಿಮಾಗೆ ಪೈರಸಿ ಕಾಟ: ಓರ್ವನ ಬಂಧನ

ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಕೆಲವು ಕಿಡಿಗೇಡಿಗಳು ಈ ಸಿನಿಮಾದ ಪೈರಸಿ ಕಾಪಿಯನ್ನು ಟಿಲಿಗ್ರಾಂ ಮೂಲಕ ಮಾರಾಟ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ.
05:10 PM Jan 04, 2024 IST | Ashika S
 ‘ಕಾಟೇರ’ ಸಿನಿಮಾಗೆ ಪೈರಸಿ ಕಾಟ  ಓರ್ವನ ಬಂಧನ

ರಾಯಚೂರು: ನಟ ದರ್ಶನ್ ಅಭಿನಯದ ಕಾಟೇರ’ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಕೆಲವು ಕಿಡಿಗೇಡಿಗಳು ಈ ಸಿನಿಮಾದ ಪೈರಸಿ ಕಾಪಿಯನ್ನು ಟಿಲಿಗ್ರಾಂ ಮೂಲಕ ಮಾರಾಟ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ.

Advertisement

ರಾಯಚೂರಿನ ಸದರ್ ಬಜಾರ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವದುರ್ಗ ತಾಲೂಕಿನ ಗಂಗಾನಾಯಕ್ ತಾಂಡದ ಮೌನೇಶ್ ಎಂಬ ಯುವಕ 40 ರೂಪಾಯಿಗೆ ‘ಕಾಟೇರ’ ಸಿನಿಮಾದ ಪೈರಸಿ ಲಿಂಕ್​ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ.

ಕಿಂಗ್​ ಪಿನ್​ ಆಗಿರುವ ಉಪೇಂದ್ರ ಎಂಬ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Advertisement

ಕಾಪಿ ರೈಟ್ ಆ್ಯಕ್ಟ್ ಮತ್ತು ಐಪಿಸಿ ಸೆಕ್ಷನ್​ 420 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ

‘ವಾಟ್ಸ್ ಆಪ್’ ಮೂಲಕ ಚಾಟ್ ಮಾಡಿ 40 ರೂಪಾಯಿ ಫೋನ್ ಪೇ ಮಾಡಿ ಸಿನಿಮಾದ ಲಿಂಕ್ ಪಡೆದಿದ್ದ ವಾದಿರಾಜ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ‘ಕಾಟೇರ’ ಸಿನಿಮಾದ ಸಕ್ಸಸ್​ ಮೀಟ್​ ನಡೆಯಿತು. ಆ ಸಂದರ್ಭದಲ್ಲಿ ದರ್ಶನ್​ ಅವರು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದರು.

Advertisement
Tags :
Advertisement