ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಂಕೆ ಸ್ಟಾಲಿನ್ ಜತೆ ಮೈತ್ರಿ ಮಾಡಿಕೊಂಡ ನಟ ಕಮಲ್ ಹಾಸನ್

ಕಮಲ್ ಹಾಸನ್ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಲೋಕಸಭೆ ಚುನಾವಣೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಇಂದು  ಘೋಷಿಸಿದ್ದಾರೆ.
03:52 PM Mar 09, 2024 IST | Ashika S

ಬೆಂಗಳೂರು: ಕಮಲ್ ಹಾಸನ್ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಲೋಕಸಭೆ ಚುನಾವಣೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಇಂದು  ಘೋಷಿಸಿದ್ದಾರೆ.

Advertisement

ಡಿಎಂಕೆ ಪ್ರಧಾನ ಕಛೇರಿ ಅಣ್ಣಾ ಅರಿವಲಯಂನಲ್ಲಿ ಕಮಲ್ ಹಾಸನ್ ಡಿಎಂಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಖ್ಯಾತ ನಟ ಕಮಲ್ ಹಾಸನ್  ಅವರು  ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಿದ್ದೇನೆ ಎಂದು ಹೇಳಿದ್ದಾರೆ.

Advertisement

ನನಗೆ ಯಾವುದೇ ಹುದ್ದೆ ಬೇಡ, 2025ರ ರಾಜ್ಯಸಭಾ ಚುನಾವಣೆಗೆ ಎಂಎನ್‌ಎಂಗೆ ಡಿಎಂಕೆ ಒಂದು ಸ್ಥಾನವನ್ನು ನೀಡಿದೆ ಎಂದು ಹೇಳಿದ್ದಾರೆ.

ಇಬ್ಬರು ನಾಯಕರ ನಡುವಿನ ಒಪ್ಪಂದದ ಪ್ರಕಾರ ತಮಿಳುನಾಡಿನ 39 ಲೋಕಸಭಾ ಸ್ಥಾನಗಳು ಮತ್ತು ಪುದುಚೇರಿ ಭಾಗದಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಸನಾತನ ಧರ್ಮ’ ವಿವಾದದ ಕುರಿತು ಉದಯನಿಧಿ ಸ್ಟಾಲಿನ್ ಅವರನ್ನು ಸಮರ್ಥಿಸಿಕೊಂಡ ಕಮಲ್ ಹಾಸನ್, ಸನಾತನದ ಬಗ್ಗೆ ಮಾತನಾಡಿದ ಕಾರಣಕ್ಕಾಗಿ ಚಿಕ್ಕ ಮಗುವನ್ನು (ಉದಯನಿಧಿ) ಗುರಿಯಾಗಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Tags :
LatestNewsNewsKannadaಎಂಕೆ ಸ್ಟಾಲಿನ್‌ಮೈತ್ರಿ
Advertisement
Next Article