ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ಹಿಂದಿನ ತಮ್ಮದೇ ದಾಖಲೆಯನ್ನು ಸರಿಗಟ್ಟಿ ಹೊಸ ದಾಖಲೆ ನಿರ್ಮಿಸಿದ್ದಾರೆ.
10:38 AM May 12, 2024 IST | Ashitha S

ಠ್ಮಂಡು: ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ಹಿಂದಿನ ತಮ್ಮದೇ ದಾಖಲೆಯನ್ನು ಸರಿಗಟ್ಟಿ ಹೊಸ ದಾಖಲೆ ನಿರ್ಮಿಸಿದ್ದಾರೆ.

Advertisement

ರೀಟಾ ಅವರು ಇಂದು (ಭಾನುವಾರ) ಬೆಳಿಗ್ಗೆ ಪರ್ವತದ ತುತ್ತತುದಿ 8,848.86 ಮೀಟರ್‌ ಎತ್ತರಕ್ಕೆ ತಲುಪಿದರು ಎಂದು ನೇಪಾಳ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಪರ್ವತವನ್ನು ಏರುವ ಮೊದಲು 'ಯಾವುದೇ ನಿರ್ದಿಷ್ಟ ಸಂಖ್ಯೆಯ ಬಾರಿ ಸಾಗರ್ಮಠವನ್ನು (ಮೌಂಟ್ ಎವರೆಸ್ಟ್‌ಗೆ ನೇಪಾಳದ ಹೆಸರು) ಏರುವ ಯೋಚನೆಯನ್ನು ಹೊಂದಿರಲಿಲ್ಲ ಎಂದು ರೀಟಾ ಹೇಳಿದ್ದಾರೆ.

Advertisement

ರೀಟಾ ಅವರು 1994 ಮೇ 13ರಂದು ಮೊದಲ ಬಾರಿಗೆ ಎವರೆಸ್ಟ್‌ ಏರಿದ್ದರು. 2022ರಲ್ಲಿ 26ನೇ ಬಾರಿಗೆ ಪರ್ವತವನ್ನು ಏರುವ ಮೂಲಕ ಅತಿ ಹೆಚ್ಚು ಬಾರಿ ಎವರೆಸ್ಟ್‌ ಏರಿದ ಮೊದಲಿಗರು ಎಂಬ ದಾಖಲೆ ನಿರ್ಮಿಸಿದ್ದರು.

Advertisement
Tags :
BreakingNewsclimberEverestindiaKami RitaNepali SherpaNewsKarnatakaRECORD
Advertisement
Next Article