ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು: ಸಿದ್ದರಾಮಯ್ಯ

ಕನ್ನಡ ಭಾಷೆಯ ಬಗ್ಗೆ ಬಹಳಷ್ಟು ಚರ್ಚೆಗಳು ಬರುತ್ತಿರುವ ಬೆನ್ನಲ್ಲೇ  ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು ಎಂಬ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
03:08 PM Dec 28, 2023 IST | Ashika S

ಬೆಂಗಳೂರು:  ಕನ್ನಡ ಭಾಷೆಯ ಬಗ್ಗೆ ಬಹಳಷ್ಟು ಚರ್ಚೆಗಳು ಬರುತ್ತಿರುವ ಬೆನ್ನಲ್ಲೇ  ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು ಎಂಬ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Advertisement

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಧರಣಿ ಮಾಡಿದ್ದಕ್ಕೆ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಆದರೆ  ಅವರು ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

ಈ ಮಧ್ಯೆ ಇಂದು ಮಧ್ಯಾಹ್ನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಗೃಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Advertisement

ಕನ್ನಡ ನಾಮಫಲ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವು ಶಾಪಿಂಗ್ ಸೆಂಟರ್ ಗಳ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದ್ದರು.

Advertisement
Tags :
LatetsNewsNewsKannadaಕನ್ನಡ ಭಾಷೆಚರ್ಚೆಚಿಂತನೆನಾಮಫಲಕನಿಯಮಸಿದ್ದರಾಮಯ್ಯ
Advertisement
Next Article