ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಇಂದು ಆರಂಭವಾಗಲಿದೆ. ಶ್ರೀ ಧರ್ಮ ರಾಯಸ್ವಾಮಿ ದೇವಾಲಯ ಹಾಗೂ ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಸೇರಿದಂತೆ ವಿವಿಧ ತಯಾರಿ ಭರದ ಸಿದ್ಧತೆ ನಡೆಯುತ್ತಿದೆ.
10:51 AM Apr 15, 2024 IST | Ashitha S

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಇಂದು ಆರಂಭವಾಗಲಿದೆ. ಶ್ರೀ ಧರ್ಮ ರಾಯಸ್ವಾಮಿ ದೇವಾಲಯ ಹಾಗೂ ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಸೇರಿದಂತೆ ವಿವಿಧ ತಯಾರಿ ಭರದ ಸಿದ್ಧತೆ ನಡೆಯುತ್ತಿದೆ.

Advertisement

ಏ.15ರ ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಈ ಬಾರಿಯೂ ಅರ್ಚಕ ಎ. ಜ್ಞಾನೇಂದ್ರ ಕರಗ ಹೊರಲಿದ್ದು, ಈಗಾಗಲೇ ದೇವಾಲಯ ಸೇರಿದ್ದು, ಜ್ಞಾನ, ಯೋಗ ಸೇರಿ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬ್ರೌವದಿಸಹಿತ ಧರ್ಮರಾಯಸ್ವಾಮಿಯ ಪರಿವಾರವನ್ನು ಹೊತ್ತು ಸಾಗುವ ಬೃಹತ್ ಮರದ ತೇರು ನವೀಕರಣಗೊಂಡು ರಥೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಉತ್ಸವದ ಯಶಸ್ಸಿಗೆ ವಕ್ಷಿಕುಲ ಕ್ಷತ್ರಿಯ ಸಮಾಜ ಬಾಂಧವರು, ಗೌಡರು, ಗಣಾಚಾರಿಗಳು, ಗಂಟೆ ಪೂಜಾರಿಗಳು, ಚಾಕರೀದಾರರು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

ಕರಗಕ್ಕೆ ಸೇಲಂ ಮೊಗ್ಗನ್ನೇ ಬಳಸಲಾಗುವುದು. ಹೀಗಾಗಿ ಭಾನುವಾರದ ನಂತರ ಮಲ್ಲಿಗೆ ಮೊಗ್ಗು ಬೆಂಗಳೂರಿಗೆ ಬರಲಿದೆ. ಉತ್ಸವದಲ್ಲಿ ಸಂಪ್ರದಾಯದಂತೆ ಜರಗನಹಳ್ಳಿಯ ಕುಲಬಾಂಧವರು ಪ್ರತಿ ವರ್ಷದಂತೆ ಬಿದಿರಿನ ಮರವನ್ನು ತರಲಿದ್ದು, ಅದನ್ನು ದೇವಾಲಯದ ಆವರಣದಲ್ಲಿ ನೆಟ್ಟು, ಸೋಮವಾರ ರಾತ್ರಿ ರಥೋತ್ಸವ ಹಾಗೂ ಧ್ವಜಾರೋಹಣ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಹೀಗೆ ಚೈತ್ರಮಾಸ ಶುಕ್ಲ ಪಕ್ಷದ ಸಪ್ತಮಿ ದಿನ ಆರಂಭವಾಗಿ ಬಿಡಿಗೆವರೆಗೆ ಉತ್ಸವ ಜರುಗಲಿದೆ. ಏ.23ರ ಚೈತ್ರ ಪೌರ್ಣಮ ದಿನವಾದ ಮಂಗಳವಾರ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವ ಹಾಗೂ ಕರಗ ಶಕ್ತ್ಯೋತ್ಸವ ವಿಜೃಂಭಣೆಯಿಂದ ಜರುಗಲಿದೆ.

Advertisement

ಕರಗ ಉತ್ಸವಕ್ಕೆ ಬಿಬಿಎಂಪಿ ವತಿಯಿಂದ 1.5 ಕೋಟಿ ಮೀಸಲಿಡಲಾಗಿದೆ. ಆದರೆ ಉತ್ಸವ ಸಮೀಪಿಸುತ್ತಿದ್ದರೂ, ಪಾಲಿಕೆಯಿಂದ ಈವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ, ಸಮಿತಿ ವತಿಯಿಂದಲೇ ಸಿದ್ಧತಾ ಕಾರ್ಯ ಕೈಗೊಳ್ಳಲಾಗಿದೆ.

Advertisement
Tags :
GOVERNMENTindiaLatestNewsNewsKarnatakaಕರಗಕರಗ ಮಹೋತ್ಸವಬೆಂಗಳೂರು
Advertisement
Next Article