For the best experience, open
https://m.newskannada.com
on your mobile browser.
Advertisement

ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳ್ತೇನೆ ಎಂದ ಬಾಲಿಪುಡ್‌ ಬೆಬೋ: "ಟಾಕ್ಸಿಕ್" ಬಗ್ಗೆನಾ ?

ಕರೀನಾ ಕಪೂರ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈ ಬೆನ್ನಲ್ಲೇ ಕರೀನಾ ಕಪೂರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಇದರಿಂದ ಕುತೂಹಲ ಮತ್ತಷ್ಟು ಹೆಚ್ಚಿದೆ. ‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.
11:16 AM Jan 11, 2024 IST | Ashitha S
ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳ್ತೇನೆ ಎಂದ ಬಾಲಿಪುಡ್‌ ಬೆಬೋ   ಟಾಕ್ಸಿಕ್  ಬಗ್ಗೆನಾ

ಮುಂಬೈ: ಕರೀನಾ ಕಪೂರ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈ ಬೆನ್ನಲ್ಲೇ ಕರೀನಾ ಕಪೂರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಇದರಿಂದ ಕುತೂಹಲ ಮತ್ತಷ್ಟು ಹೆಚ್ಚಿದೆ. ‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

Advertisement

ಯಶ್ ಅವರು ‘ಟಾಕ್ಸಿಕ್’ ಸಿನಿಮಾನ ಕಳೆದ ವರ್ಷ ಘೋಷಣೆ ಮಾಡಿದರು. ಮಲಯಾಳಂನ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕೆವಿಎನ್​ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

ಈ ನಡುವೆ ಕರೀನಾ ಕಪೂರ್ ತಂಡದ ಕಡೆಯಿಂದ ಒಂದು ಪ್ರಕಟಣೆ ಹೊರಡಿಸಲಾಗಿದೆ. ‘ಕರೀನಾ ಕಪೂರ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರೆಬರೆ ಗೊತ್ತಿರುವ ವಿಚಾರ ಪ್ರಕಟಿಸಬೇಡಿ. ಶೀಘ್ರವೇ ಎಗ್ಸೈಟಿಂಗ್ ವಿಚಾರ ಬರಲಿದೆ. ಅಧಿಕೃತ ಘೋಷಣೆಗಾಗಿ ಕಾಯಿರಿ’ ಎಂದು ಕರೀನಾ ಕಪೂರ್ ಟೀಂ ಹೇಳಿದೆ. ಈ ವಿಚಾರ ಕೇಳಿದ ಬಳಿಕ ಕುತೂಹಲ ಹೆಚ್ಚಿದೆ.

Advertisement

Advertisement
Tags :
Advertisement