For the best experience, open
https://m.newskannada.com
on your mobile browser.
Advertisement

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ.
04:15 PM May 09, 2024 IST | Ashika S
ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ.

Advertisement

ಫಲಿತಾಂಶ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯೋಪಾಧ್ಯಾಯನಿ ಉಷಾ ಸಹನಾಗೆ ಸಿಹಿ ತಿನ್ನಿಸಿ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಹನಾ, 623 ಅಂಕ ಪಡೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಪೋಷಕರು ಶಿಕ್ಷಕರ ಪ್ರೋತ್ಸಾಹದಿಂದ ಈ ಅಂಕ ಪಡೆಯಲು ಸಾಧ್ಯವಾಗಿದೆ. ಶಾಲೆಯಲ್ಲಿ ನಿರಂತರ ಪರೀಕ್ಷೆಗಳನ್ನು ಮಾಡುತ್ತಿದ್ದರು. ಹಳೆ ಪ್ರಶ್ನೆ ಪತ್ರಿಕೆಗಳ ರಿವಿಜನ್ ಮಾಡಿಸುತ್ತಿದ್ದರು. ತಜ್ಞ, ತರಬೇತುದಾರರ ಮೂಲಕ ಕೋಚಿಂಗ್ ಕೊಡಿಸುತ್ತಿದ್ದರು. ನಿರಂತರ ಓದಿಗೆ, ಏಕಾಗ್ರತೆಗೆ ಆದ್ಯತೆ ನೀಡುತ್ತಿದ್ದರು. ನನ್ನ ಜೀವನದಲ್ಲಿ ತಂದೆ ತಾಯಿಯ ಪಾತ್ರ ದೊಡ್ಡದು. ಶಾಲಾ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಗೆ ಧನ್ಯವಾದ ಎಂದಿದ್ದಾರೆ.

ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಪೂರ್ಣ ಬೆಂಬಲ ನೀಡಬೇಕು ಎಂದು ಹೇಳಿದರು.

Advertisement

Advertisement
Tags :
Advertisement