ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ: ಬಿಜೆಪಿ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್​​ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಾಗ್ದಾಳಿ ನಡೆಸಿದೆ.
03:15 PM Feb 16, 2024 IST | Ashika S

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್​​ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಾಗ್ದಾಳಿ ನಡೆಸಿದೆ.

Advertisement

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಇದು ಬಜೆಟ್ ಅಲ್ಲ – ಇದು ಕರ್ನಾಟಕ ಜನತೆಯ ಕಿವಿ ಮೇಲೆ ಹೂವಿನ ತೋಟ ಎಂದು ವ್ಯಂಗ್ಯಚಿತ್ರವೊಂದರ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

‘ಸಾಲ- ಶೂಲದ ಹರಿಕಾರ ಸಾಲರಾಮಯ್ಯ. ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ‘ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ.

Advertisement

ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂಪಾಯಿ ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂಪಾಯಿ ಸಾಲ ಹೇರಿದ್ದಾರೆ ಎಂದು ಬಿಜೆಪಿ ಉಲ್ಲೇಖಿಸಿದೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ’ ಎಂದು ಬಿಜೆಪಿ ಕಿಡಿಕಾರಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಸಿದ್ದರಾಮಯ್ಯ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Tags :
LatestNewsNewsKannadaಎಕ್ಸ್‌ಬಜೆಟ್ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement
Next Article