ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಹು ನಿರೀಕ್ಷಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.
03:47 PM Feb 29, 2024 IST | Ashitha S

ಬೆಂಗಳೂರು: ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.

Advertisement

ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು. ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು.

ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaಬೆಂಗಳೂರುರಾಜ್ಯ ಸರ್ಕಾರಸಿಎಂ ಸಿದ್ದರಾಮಯ್ಯ
Advertisement
Next Article