ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಎರಡನೇ ಹಂತದ  ಲೋಕಸಭಾ ಚುನಾವಣೆಯ ಮತಹಬ್ಬಕ್ಕೆ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಆಯೋಗ ಮತದಾನಕ್ಕೆ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡಿದೆ.
07:07 AM Apr 26, 2024 IST | Ashika S

ಬೆಂಗಳೂರು: ಎರಡನೇ ಹಂತದ  ಲೋಕಸಭಾ ಚುನಾವಣೆಯ ಮತಹಬ್ಬಕ್ಕೆ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಆಯೋಗ ಮತದಾನಕ್ಕೆ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡಿದೆ.

Advertisement

ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ನ ಮೂವರು ಸೇರಿದಂತೆ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಇಂದು ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ  ನಡೆಯಲಿದೆ. ಬೆಂಗಳೂರಿನ ನಾಲ್ಕು ಕ್ಷೇತ್ರ ಜತೆಗೆ ಮಂಡ್ಯ, ಮೈಸೂರು, ತುಮಕೂರಿನಲ್ಲಿ ವೋಟಿಂಗ್ ನಡೆಯಲಿದೆ. ಹಾಗೇನೆ ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಚಿತ್ರದುರ್ಗ ಹೀಗೆ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Advertisement

ಇನ್ನು ನಿನ್ನೆ ಬೆಳಗಿನಿಂದಲೇ 14 ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಮಾಡಿ ಇವಿಎಂ, ವಿವಿಪ್ಯಾಟ್‌, ಮತದಾರರ ಪಟ್ಟಿ, ಶಾಹಿ ಸೇರಿದಂತೆ ಚುನಾವಣೆ ಸಾಮಾಗ್ರಿ ರವಾನಿಸಲಾಗಿದೆ. ಇವುಗಳನ್ನ ಹೊತ್ತು ಚುನಾವಣೆ ಸಿಬ್ಬಂದಿ ಮತಗಟ್ಟೆ ಸೇರಿದ್ದಾರೆ.

ಎಷ್ಟು ಮತದಾರರಿದ್ದಾರೆ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದ್ದು, ಒಟ್ಟು 2ಕೋಟಿ 88 ಲಕ್ಷದ 19 ಸಾವಿರದ 342 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1ಕೋಟಿ 44 ಲಕ್ಷದ 17ಸಾವಿರದ 530 ಪುರುಷ ಮತದಾರರು, 1ಕೋಟಿ 43ಲಕ್ಷದ 87ಸಾವಿರದ 585 ಮಹಿಳಾ ಮತದಾರರಿದ್ದಾರೆ.

ಮತಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಮತದಾನದ ವೇಳೆ ವೇಳೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮನ್‌ರೆಗಾ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್ ಡ್ರೈವಿಂಗ್ ಲೈಸೆನ್ಸ್ ತೋರಿಸಿ ಹಕ್ಕು ಚಲಾಯಿಸಬಹುದು. 30ಸಾವಿರದ 600 ಮತಗಟ್ಟೆಗಳ ಪೈಕಿ 19,701 ಮತಗಟ್ಟೆಗಳಲ್ಲಿ ಲೈವ್​ವೆಬ್​ಕಾಸ್ಟ್ ಇರಲಿದೆ ಅಂತಾ ಚುನಾವಣಾ ಆಯೋಗ ತಿಳಿಸಿದೆ.

Advertisement
Tags :
2024 LOKSABHA ELECTIONCANDIDATESELECTION COMMISIONLatetsNewsNewsKarnatakapolls
Advertisement
Next Article