ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಡಗೀತೆ ಬಗ್ಗೆ ತಿದ್ದುಪಡಿ ಆದೇಶ ಹೊರಡಿಸಿದ ಸರ್ಕಾರ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ಆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ತಿದ್ದುಪಡಿ ಆದೇಶ ಹೊರಡಿಸಿದೆ.
02:57 PM Feb 21, 2024 IST | Ashitha S

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ಆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ತಿದ್ದುಪಡಿ ಆದೇಶ ಹೊರಡಿಸಿದೆ.

Advertisement

ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ಕಲಾಪದಲ್ಲಿಯೂ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪ್ರತಿಪಕ್ಷಗಳ ಟೀಕಾ ಪ್ರಹಾರದ ಮಧ್ಯೆ, ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೈರಾಣಾಗುವಂತಾಯಿತು.

"ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು" ಎಂಬುದಾಗಿ ತಿದ್ದುಪಡಿ ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

Advertisement

 

 

Advertisement
Tags :
bengaluruBJPBreakingNewsCongressGOVERNMENTindiaLatestNewsನವದೆಹಲಿಬೆಂಗಳೂರು
Advertisement
Next Article