ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:07 AM Mar 19, 2024 IST | Ashitha S

ಬೆಂಗಳೂರು: ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್​ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಕೊಪ್ಪಳದಲ್ಲಿ ಮಾರ್ಚ್​ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್​ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

Advertisement

ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕನಹಳ್ಳಿಯಲ್ಲಿ 38.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement
Tags :
GOVERNMENTindiaKARNATAKALatestNewsNewsKannadaಬೆಂಗಳೂರು
Advertisement
Next Article