For the best experience, open
https://m.newskannada.com
on your mobile browser.
Advertisement

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
08:26 AM May 17, 2024 IST | Ashitha S
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಬೆಂಗಳೂರು: ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗಾಳಿ ಬೀಸಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ.

Advertisement

Advertisement
Tags :
Advertisement