For the best experience, open
https://m.newskannada.com
on your mobile browser.
Advertisement

ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ?

ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ ಎಂದು ಕಾಯುತ್ತಿದ್ದ ಮಕ್ಕಳಿಗೆ ಸಿಹಿಸುದ್ದಿಯೊಂದು ಇಲ್ಲಿದೆ.  ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
07:40 PM Apr 05, 2024 IST | Ashitha S
ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ

ಬೆಂಗಳೂರು: ಕರ್ನಾಟಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗಲಿದೆ ಎಂದು ಕಾಯುತ್ತಿದ್ದ ಮಕ್ಕಳಿಗೆ ಸಿಹಿಸುದ್ದಿಯೊಂದು ಇಲ್ಲಿದೆ.  ಏಪ್ರಿಲ್ 11 ರಿಂದ ಮೇ 29 ರವರೆಗೆ ಬೇಸಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಇನ್ನು, ಈಗಾಗಲೇ 1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ಪರೀಕ್ಷೆಗಳು ಮುಗಿದಿದೆ. ಸದ್ಯದಲ್ಲೇ ಈ ಪರೀಕ್ಷೆ ಫಲಿತಾಂಶ ಕೂಡ ಪ್ರಕಟವಾಗಲಿದೆ. ಈ ಮಧ್ಯೆ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಆರಂಭವಾಗಲಿದೆ ಎನ್ನುತ್ತಿವೆ ಮೂಲಗಳು.

ಜತೆಗೆ ಇಷ್ಟು ದಿನ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಆಹಾರ ಧಾನ್ಯಗಳು ವಿತರಣೆ ಮಾಡುತ್ತಿತ್ತು. ಆದರೆ ಈ ಬಾರಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಶಾಲೆಗಳಲ್ಲೇ ನೀಡಲಿದ್ದೇವೆ ಎಂದು ಶಿಕ್ಷಣ ಇಲಾಖೆ ಹೇಳಿದೆ.

Advertisement

ಇನ್ನು 2024-25 ನೇ ಶೈಕ್ಷಣಿಕ ಸಾಲಿನ 1ನೇ ತರಗತಿ ಪ್ರವೇಶಾತಿಯೂ ಜೂನ್ 1 ರಿಂದ ಆರಂಭವಾಗಲಿದೆ. ಈ ಸಾಲಿನಿಂದ 1ನೇ ತರಗತಿ ಪ್ರವೇಶಕ್ಕೆ ದಾಖಲು ಮಾಡಿಸುವ ದಿನಾಂಕಕ್ಕೆ ಕಡ್ಡಾಯವಾಗಿ ವಿದ್ಯಾರ್ಥಿ 6 ವರ್ಷ ಪೂರೈಸಿರಬೇಕು ಎಂಬ ನಿಯಮವನ್ನು ಶಾಲಾ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ.

Advertisement
Tags :
Advertisement