For the best experience, open
https://m.newskannada.com
on your mobile browser.
Advertisement

ಕರ್ನಾಟಕದಿಂದ ಅಯೋಧ್ಯೆಗೆ ಆರು ವಿಶೇಷ ರೈಲು

ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಇಂದಿನಿಂದ ಸಾರ್ವಜನಿಕರೂ ಬಾಲ ರಾಮನ ದರ್ಶನ ಪಡೆಯಬಹುದಾಗಿದೆ. ಇದರೊಂದಿಗೆ, ವಿವಿಧ ರಾಜ್ಯಗಳಿಂದ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.
12:33 PM Jan 23, 2024 IST | Ashitha S
ಕರ್ನಾಟಕದಿಂದ ಅಯೋಧ್ಯೆಗೆ ಆರು ವಿಶೇಷ ರೈಲು

ಬೆಂಗಳೂರು: ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಇಂದಿನಿಂದ ಸಾರ್ವಜನಿಕರೂ ಬಾಲ ರಾಮನ ದರ್ಶನ ಪಡೆಯಬಹುದಾಗಿದೆ. ಇದರೊಂದಿಗೆ, ವಿವಿಧ ರಾಜ್ಯಗಳಿಂದ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.

Advertisement

ಕರ್ನಾಟಕದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡುವ ನಿರೀಕ್ಷೆ ಇದೆ. ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ನೈಋತ್ಯ ರೈಲ್ವೆ ‘ಆಸ್ತಾ ಸ್ಪೆಷಲ್ ಎಕ್ಸ್‌ಪ್ರೆಸ್’ ವಿಶೇಷ ರೈಲುಗಳನ್ನು ಓಡಿಸಲಿದೆ.

ಪ್ರಯಾಣಿಕರು ಇಂಡಿಯನ್ ರೈಲ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್​ಸಿಟಿಸಿ ಅಪ್ಲಿಕೇಶನ್ ಅಥವಾ ವೆಬ್‌ಸೈಟ್) ಮೂಲಕ ಟಿಕೆಟ್‌ಗಳನ್ನು ಕಾಯ್ದಿರಿಸಬೇಕು. ಕೌಂಟರ್‌ನಲ್ಲಿ ಯಾವುದೇ ಟಿಕೆಟ್‌ಗಳನ್ನು ನೀಡಲಾಗುವುದಿಲ್ಲ ಎಂದು ನೈಋತ್ಯ ರೈಲ್ವೆ ಈಗಾಗಲೇ ತಿಳಿಸಿದೆ. ಇನ್ನು ಬುಕಿಂಗ್ ಮತ್ತು ದರ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ರೈಲ್ವೆ ತಿಳಿಸಿದೆ.

Advertisement

ರೈಲು ಸಂಖ್ಯೆ 06203
ಇದು ತುಮಕೂರನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಬುಧವಾರ (ಫೆಬ್ರವರಿ 7 ಮತ್ತು 21) ತುಮಕೂರಿನಿಂದ ಮತ್ತು ಫೆಬ್ರವರಿ 10 ಮತ್ತು 24 ರಂದು ಅಯೋಧ್ಯಾಧಾಮದಿಂದ ಹೊರಡಲಿದೆ.

ರೈಲು ಸಂಖ್ಯೆ 06204
ಇದು ಭಾನುವಾರ (ಫೆಬ್ರವರಿ 11 ಮತ್ತು 25) ಚಿತ್ರದುರ್ಗದಿಂದ ಮತ್ತು ಬುಧವಾರದಂದು (ಫೆಬ್ರವರಿ 14 ಮತ್ತು 28) ಅಯೋಧ್ಯಾಧಾಮದಿಂದ ಹೊರಡಲಿದೆ.

ರೈಲು ಸಂಖ್ಯೆ 06205
ಇದು ವಾಸ್ಕೋಡಗಾಮಾವನ್ನು ದರ್ಶನ್ ನಗರದೊಂದಿಗೆ (ಅಯೋಧ್ಯೆಯ ಸಮೀಪವಿರುವ ರೈಲು ನಿಲ್ದಾಣ) ಸಂಪರ್ಕಿಸುತ್ತದೆ. ರೈಲು ಸೋಮವಾರ (ಫೆಬ್ರವರಿ 12 ಮತ್ತು 26) ವಾಸ್ಕೋಡಗಾಮಾದಿಂದ ಮತ್ತು ಶುಕ್ರವಾರ (ಫೆಬ್ರವರಿ 16 ಮತ್ತು ಮಾರ್ಚ್ 1) ದರ್ಶನ್ ನಗರದಿಂದ ಹೊರಡಲಿದೆ.

ರೈಲು ಸಂಖ್ಯೆ 06206
ಇದು ಮೈಸೂರನ್ನು ಅಯೋಧ್ಯೆಯೊಂದಿಗೆ ಸಂಪರ್ಕಿಸುತ್ತದೆ ಮತ್ತು ತಲಾ ಒಂದು ಪ್ರವಾಸವನ್ನು ಮಾಡಲಿದೆ. ಇದು ಶನಿವಾರ (ಫೆಬ್ರವರಿ 17) ಮೈಸೂರಿನಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಕೆಎಸ್‌ಆರ್ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಬೀರೂರು, ಚಿತ್ರದುರ್ಗ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಬಿಜಾಪುರ, ಕಲಬುರಗಿ, ವಾಡಿ, ಬಲ್ಹರ್ಷಾ, ನಾಗಪುರ, ಜಬಲ್‌ಪುರ ಮತ್ತು ಪ್ರಯಾಗರಾಜ್ ಮೂಲಕ ಹಾದು ಹೋಗಲಿದೆ.

ರೈಲು ಸಂಖ್ಯೆ 06207
ಇದು ಶನಿವಾರ (ಫೆಬ್ರವರಿ 17) ಬೆಳಗಾವಿಯಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಧಾರವಾಡ, ಹುಬ್ಬಳ್ಳಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಸಿಕಂದರಾಬಾದ್, ಬಲ್ಹರ್ಷಾ ಮತ್ತು ಪ್ರಯಾಗರಾಜ್ ಮೂಲಕ ಚಲಿಸುತ್ತದೆ.

Advertisement
Tags :
Advertisement