ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರ್ನಾಟಕ ಪ್ರವಾಸೋದ್ಯಮದಲ್ಲಿ ಭರ್ಜರಿ ಜಂಪ್ !

ಮಹಿಳೆಯರಿಗೆ ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣ ಯೋಜನೆ ಸೇರಿದಂತೆ ಹಲವು ಕಾರಣಗಳಿಂದ ಕರ್ನಾಟಕದ ವಿವಿಧ ಪ್ರವಾಸಿ ತಾಣಗಳಿಗೆ ಪ್ರಯಾಣಿಕರ ಸಂಖ್ಯೆ ಕೇವಲ ಒಂದು ವರ್ಷದಲ್ಲಿ 10 ಕೋಟಿಯಷ್ಟು ಹೆಚ್ಚಾಗಿದೆ.
01:42 PM Feb 07, 2024 IST | Ashitha S

ಬೆಂಗಳೂರು: ಮಹಿಳೆಯರಿಗೆ ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣ ಯೋಜನೆ ಸೇರಿದಂತೆ ಹಲವು ಕಾರಣಗಳಿಂದ ಕರ್ನಾಟಕದ ವಿವಿಧ ಪ್ರವಾಸಿ ತಾಣಗಳಿಗೆ ಪ್ರಯಾಣಿಕರ ಸಂಖ್ಯೆ ಕೇವಲ ಒಂದು ವರ್ಷದಲ್ಲಿ 10 ಕೋಟಿಯಷ್ಟು ಹೆಚ್ಚಾಗಿದೆ.

Advertisement

2023 ರಲ್ಲಿ, ರಾಜ್ಯದಾದ್ಯಂತ 28.45 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ. 2022 ರಲ್ಲಿ ಈ ಸಂಖ್ಯೆ 18.27 ಕೋಟಿ ಆಗಿತ್ತು. ಇದು ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ಪ್ರವಾಸಿಗರ ಸಂಖ್ಯೆಯಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ಕೋವಿಡ್ ನಂತರದ ಪ್ರಯಾಣದ ಉತ್ಸಾಹ, ಪ್ರವಾಸೋದ್ಯಮಕ್ಕೆ ಉತ್ತೇಜನ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸರ್ಕಾರದ ಉಪಕ್ರಮವು ಈ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಸೋದ್ಯಮಕ್ಕೆ ಉತ್ತೇಜನ ಮತ್ತು ಸರ್ಕಾರದ ಉಪಕ್ರಮಗಳು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಾಯ ಮಾಡಿದೆ. ರಾಜ್ಯದ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ. ರಾಮ್ ಪ್ರಸಾದ್ ಮನೋಹರ್ ವಿ ತಿಳಿಸಿದ್ದಾರೆ.

Advertisement

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಬೆಳಗಾವಿ, ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

 

 

Advertisement
Tags :
CongressGOVERNMENTindiaKARNATAKALatestNewsNewsKannadaಪ್ರವಾಸೋದ್ಯಮಬೆಂಗಳೂರು
Advertisement
Next Article