For the best experience, open
https://m.newskannada.com
on your mobile browser.
Advertisement

ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:16 AM Mar 18, 2024 IST | Ashitha S
ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ಕೆಲವೆಡೆ ಮಳೆಯ ಸಿಂಚನವಾಗಿದೆ. ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ,

Advertisement

Advertisement
Tags :
Advertisement