ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ವೈರಲ್; ಸ್ಫೋಟಕ ಟ್ವಿಸ್ಟ್ ಕೊಟ್ಟ ಚಾಲಕ !

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಶುರುವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಮೇಲೆ ಈ ಕೇಸ್ ಹಲವು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
03:09 PM Apr 30, 2024 IST | Ashitha S

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಶುರುವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಮೇಲೆ ಈ ಕೇಸ್ ಹಲವು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

Advertisement

ಇಂದು ಪ್ರಜ್ವಲ್ ರೇವಣ್ಣ ಅವರ ಬಳಿ 15 ವರ್ಷ ಡ್ರೈವರ್ ಆಗಿದ್ದ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದು, ಹಾಸನದಲ್ಲಿ ಪೆನ್‌ಡ್ರೈವ್ ರಿಲೀಸ್ ಮಾಡಿದ್ದು ಯಾರು ಅನ್ನೋದರ ಬಗ್ಗೆಯೇ ಚರ್ಚೆಯಾಗುತ್ತಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಕಾರು ಚಾಲಕನಾಗಿದ್ದ ಕಾರ್ತಿಕ್ ಇದೀಗ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್‌ಐಟಿ ವಿಚಾರಣೆಗೆ ತೆರಳುವ ಮುನ್ನ ಡ್ರೈವರ್ ಕಾರ್ತಿಕ್ ವಿಡಿಯೋ ಕುರಿತು, ಬಿಜೆಪಿ ಮುಖಂಡ ದೇವರಾಜೇಗೌಡ ಅವರ ಮೇಲೆ ಆರೋಪ ಮಾಡಿದ್ದಾರೆ.

Advertisement

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಸ್ಟೇ ತಂದ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ವಕೀಲರೂ ಆದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಭೇಟಿ ಆಗಿದ್ದೆ. ಈ ವೇಳೆ ದೇವರಾಜೇಗೌಡ ಅವರಿಗೆ ಪೆನ್‌ಡ್ರೈವ್‌ನ ಒಂದು ಕಾಪಿ ಕೊಟ್ಟಿದ್ದೇನೆ. ಅವರು ಯಾವುದೇ ಸ್ವಾರ್ಥಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಹೇಳಿ ನಂಬಿ ಕೊಟ್ಟಿದ್ದೇನೆ. ಕಾಂಗ್ರೆಸ್ ನಾಯಕರಿಗೆ ನಾನು ಪೆನ್‌ಡ್ರೈವ್ ಕೊಟ್ಟಿಲ್ಲ. ಈಗ ತಾವು ಬಚಾವ್ ಆಗುವುದಕ್ಕೋಸ್ಕರ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಸಿರುವ ದೇವರಾಜೇಗೌಡ, ನಾನೊಬ್ಬ ಬಿಜೆಪಿ ಮುಖಂಡ ಅನ್ನೋದಕ್ಕಿಂತ ನಾನು ವಕೀಲನಾಗಿದ್ದೇನೆ. ನನ್ನ ಕಕ್ಷಿದಾರ ಅವರು. ವಕೀಲರಿಗೆ ಏನು ಕೊಡಬೇಕೋ ಅದನ್ನು ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ. ವಕೀಲನಾಗಿ ಕಕ್ಷಿದಾರನ ಬಳಿ ನಾನು ಸಾಕ್ಷಿ ಕೇಳಿದ್ದಾನೆ. ಕಾಂಗ್ರೆಸ್‌ನವರ ಬಳಿ ಆತ ಹೋಗಿದ್ದಾನೆ. ನಾನು ಚುನಾವಣೆಯಲ್ಲಿ ನಿಂತಾಗ ಪೆನ್‌ಡ್ರೈವ್ ಬಳಸಿಕೊಳ್ಳಬಹುದಿತ್ತು.

ಇದೀಗ ಎಸ್‌ಐಟಿ ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ. ನನ್ನಿಂದ ಯಾರಿಗೆ ಪೆನ್‌ಡ್ರೈವ್ ಹೋಗಿದೆ ಅನ್ನೋ ಸತ್ಯ ಹೊರ ಬರಲಿ ಎಂದು ಹೊಳೆನರಸೀಪುರ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

 

Advertisement
Tags :
BJPCongresscrimeGOVERNMENTindiaJDSಬೆಂಗಳೂರು
Advertisement
Next Article