ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಇನ್ನೂ 4 ದಿನ ಸೆರೆವಾಸ

ಕರವೇ ಅಧ್ಯಕ್ಷ ನಾರಾಯಣ ಗೌಡ ಗೆ ಇನ್ನೂ 4 ದಿನ ಜೈಲು ಶಿಕ್ಷೆ ಮುಂದುವರಿದಿದೆ.
06:04 PM Jan 02, 2024 IST | Ashika S

ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಇನ್ನೂ 4 ದಿನ ಜೈಲು ಶಿಕ್ಷೆ ಮುಂದುವರಿದಿದೆ.

Advertisement

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿ ಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶವನ್ನು ಕಾಯ್ದಿರಿಸಿದ್ದು, ಜನವರಿ 6ರಂದು ಜಾಮೀನು ಬಗ್ಗೆ ಆದೇಶ ಪ್ರಕಟಿಸಲಿದೆ.

ಈ ಬಗ್ಗೆ  ಮಾತನಾಡಿದ ಕರವೇ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ‘ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರವೇ ಮಹಿಳಾ ಹೋರಾಟಗಾರರ ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದು, ಪೊಲೀಸರ ಕುಮ್ಮಕ್ಕಿನಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೀತಿದೆ ಎಂದರು.

Advertisement

ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಬಿಡುಗಡೆಗಾಗಿ ಶಕ್ತಿ ದೇವತೆ ಬನಶಂಕರಿಯ ಮೊರೆ ಹೋಗಿದ್ದಾರೆ.  ಅಶ್ವಿನಿ ಗೌಡ ನೇತೃತ್ವದಲ್ಲಿ ಪೂಜೆ ತಾಯಿ ಬನಶಂಕರಿಗೆ ಪೂಜೆ ನೆರವೇರಿಸಿ ಪ್ರಸಾದ ತೆಗೆದುಕೊಂಡು ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.

ಪ್ರಸ್ತುತ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಕರವೇಯ 32 ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

 

Advertisement
Tags :
LatestNewsNewsKannadaಜೈಲುನಾರಾಯಣ ಗೌಡಶಿಕ್ಷೆ
Advertisement
Next Article