ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ.
05:49 PM Jan 01, 2024 IST | Ashika S

ಕಾಸರಗೋಡು: ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ.

Advertisement

ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತಪಟ್ಟವಳು.

ಶನಿವಾರ ರಾತ್ರಿ ಮಲಗಿದ್ದ ಈಕೆ ಮರುದಿನ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಗಾಬರಿ ಗೊಂಡ ಮನೆಯವರು ಶೋಧ ನಡೆಸಿದ್ದು, ಇನ್ನೊಂದು ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಜಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಪರಿಸರ ವಾಸಿಗಳು ಹಾಗೂ ಮನೆಯವರು ಬಾಗಿಲು ಮುರಿದು ನೋಡಿದಾಗ ರೆನಾ ಫಾತಿಮಾ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯುವತಿಗೆ ಯುವಕ ನೋರ್ವ ಕಿರುಕುಳ ನೀಡುತ್ತಿದ್ದುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರೆನಾ ಫಾತಿಮಾ ಳ ಮೊಬೈಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatestNewsNewsKannadaನೇಣು ಬಿಗಿದುಪತ್ತೆಮೃತಯುವತಿ
Advertisement
Next Article