For the best experience, open
https://m.newskannada.com
on your mobile browser.
Advertisement

ಕಾಸರಗೋಡು: ರೈಲಿನಿಂದ ಬಿದ್ದು ಯುವತಿ ಸಾವು

ಯುವತಿಯೋರ್ವಳು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು.
03:24 PM Jan 06, 2024 IST | Gayathri SG
ಕಾಸರಗೋಡು  ರೈಲಿನಿಂದ ಬಿದ್ದು ಯುವತಿ ಸಾವು

ಕಾಸರಗೋಡು: ಯುವತಿಯೋರ್ವಳು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು.

Advertisement

ಪಳ್ಳಿಕೆರೆ ಮಾಸ್ತಿ ಗುಡ್ಡೆಯ ರೈಲ್ವೆ ಹಳಿ ಸಮೀಪ ಮೃತ ದೇಹ ಪತ್ತೆಯಾಗಿದೆ. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಪರಿಸರ ವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಯಿತು. ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು.

Advertisement

ಉದ್ಯೋಗದ ನಿಮಿತ್ತ ನೇತ್ರಾವತಿ ರೈಲಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಾಹಿತಿ ತಿಳಿದು ಸಂಬಂಧಿಕರು ಕಾಸರಗೋಡಿಗೆ ಹೊರಟಿದ್ದಾರೆ.

Advertisement
Tags :
Advertisement