ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಜ್ರಿವಾಲ್​ ರಾಜೀನಾಮೆ ಬಿಜೆಪಿ ಪ್ರೊಟೆಸ್ಟ್​; ಪಿಎಂ ನಿವಾಸಕ್ಕೆ ಮುತ್ತಿಗೆ ಆಪ್ ಕರೆ

ಈ ಹಿಂಧೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
01:52 PM Mar 26, 2024 IST | Ashitha S

ವದೆಹಲಿ: ಈ ಹಿಂಧೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

Advertisement

ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿ ಒತ್ತಡ ಹೇರತೊಡಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಬಿಜೆಪಿ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಸೆಕ್ರೆಟರಿಯೇಟ್‌ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪ್ರತಿಭಟನಾ ನಿರತರು ಪೊಲೀಸ್​ ಬ್ಯಾರಿಕೇಡ್​ಗಳನ್ನು ಭೇದಿಸಿ ಮುನ್ನುಗುತ್ತಿರುವುದನ್ನು ನೋಡಬಹುದಾಗಿದೆ. ಇ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Advertisement

ಇತ್ತ ಬಿಜೆಪಿಗೆ ಪ್ರತಿಯಾಗಿ ಆಮ್​ ಆದ್ಮಿ ಪಕ್ಷವು ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂಭಾಗ ಪ್ರತಿಭಟನೆ ನಡೆಸುತ್ತಿದೆ. ಕೇಜ್ರಿವಾಲ್‌ ಅವರನ್ನು ಅಬಕಾರಿ ನೀತಿ ಹೆಸರಿನಲ್ಲಿ ಅನಗತ್ಯವಾಗಿ ಸಿಲುಕಿಸಿ ಬಂಧಿಸಲಾಗಿದೆ. ಅವರ ಪಾತ್ರವೇನೂ ಇದರಲ್ಲಿ ಇಲ್ಲ. ಇದರ ಹಿಂದೆ ರಾಜಕೀಯ ಅಡಗಿದೆ. ಲೋಕಸಭೆ ಚುನಾವಣೆಯಲ್ಲಿ ಆಪ್‌ ಪ್ರಭಾವ ತಗ್ಗಿಸಲು ಕೇಜ್ರಿವಾಲ್‌ ಬಂಧನವಾಗಿರುವ ಅನುಮಾನಗಳಿದ್ದು. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಪ್‌ ಮುಖಂಡರು ಆಗ್ರಹಿಸಿದ್ದಾರೆ.

Advertisement
Tags :
AAPBJPCongressGOVERNMENTindiaLatestNewsNewsKannadaಕೇಜ್ರಿವಾಲ್‌
Advertisement
Next Article