For the best experience, open
https://m.newskannada.com
on your mobile browser.
Advertisement

ಜೈಲಿನಿಂದಲೇ ಕೇಜ್ರಿವಾಲ್ ಸರ್ಕಾರ ನಡೆಸಲಿದ್ದಾರೆ: ಸಚಿವೆ ಅತಿಶಿ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ. 'ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅಗತ್ಯ ಬಿದ್ದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ.
08:58 AM Mar 22, 2024 IST | Ashitha S
ಜೈಲಿನಿಂದಲೇ ಕೇಜ್ರಿವಾಲ್ ಸರ್ಕಾರ ನಡೆಸಲಿದ್ದಾರೆ  ಸಚಿವೆ ಅತಿಶಿ

ವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ. 'ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅಗತ್ಯ ಬಿದ್ದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ.

Advertisement

ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿಲ್ಲ. ಜೈಲಿನಿಂದ ಸರ್ಕಾರ ನಡೆಸಕೂಡದು ಎಂದು ನಿರ್ಬಂಧಿಸುವ ಯಾವುದೇ ಕಾನೂನುಗಳು ಇಲ್ಲ. ಹೀಗಾಗಿ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ' ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.ಈ ಮೂಲಕ ಕೇಜ್ರಿವಾಲ್‌ ಅವರು, ಸ್ವಾತಂತ್ರ್ಯ ನಂತರದಲ್ಲಿ ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿ ಎನಿಸಿದ್ದಾರೆ.

Advertisement

ಲೋಕಸಭಾ ಚುನಾವಣೆಗೂ ಮುನ್ನವೇ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಬಹುದೊಡ್ಡ ಸಂಚಿನ ಭಾಗ ಎಂದು ಎಎಪಿ ಆರೋಪಿಸಿದೆ.

Advertisement
Tags :
Advertisement