For the best experience, open
https://m.newskannada.com
on your mobile browser.
Advertisement

ಕೀನ್ಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು

ಕೀನ್ಯಾದ ರಾಜಧಾನಿ ನೈರೋಬಿಯಿಂದ 400 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. 
10:41 AM Apr 19, 2024 IST | Ashika S
ಕೀನ್ಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ  ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು

ನೈರೋಬಿ: ಕೀನ್ಯಾದ ರಾಜಧಾನಿ ನೈರೋಬಿಯಿಂದ 400 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.

Advertisement

ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು,  ಗುರುವಾರ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ (61) ಸೇರಿದಂತೆ 9 ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

Advertisement

ಕೀನ್ಯಾದ ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2.20ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ತಂಡವನ್ನು ಕಳುಹಿಸಲಾಗಿದೆ ಎಂದು ಅಧ್ಯಕ್ಷ ವಿಲಿಯಂ ರುಟೊ ಹೇಳಿದ್ದಾರೆ.

ಮೃತ ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಈ ಹಿಂದೆ ಕೀನ್ಯಾ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಉಪ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು ಮಿಲಿಟರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಕಳೆದ ವರ್ಷ ಅವರನ್ನು ರಕ್ಷಣಾ ಮುಖ್ಯಸ್ಥ ಜನರಲ್ ಆಗಿ ಬಡ್ತಿ ನೀಡಲಾಗಿತ್ತು.

ಹೆಲಿಕಾಪ್ಟರ್ ಪತನದಲ್ಲಿ ವೀರ ಮರಣವನ್ನಪ್ಪಿದ ಸೇನಾ ಮುಖ್ಯಸ್ಥ ಸೇರಿ 9 ಯೋಧರಿಗೆ ಇಡೀ ರಾಷ್ಟ್ರ ಸಂತಾಪ ಸೂಚಿಸಿದೆ.

Advertisement
Tags :
Advertisement